ನ್ಯೂಸ್ ನಾಟೌಟ್: ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಜನ ಔಷಧ ಅಂಗಡಿಯಲ್ಲಿ ಇತರ ಔಷಧಿಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್. ಪೊನ್ನಣ್ಣ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಇದೇ ವೇಳೆ ಶಾಸಕರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಹಲವು ಜನ ಔಷಧಿ ಕೇಂದ್ರದಲ್ಲಿ ನಿಯಮ ಮೀರಿ ಇತರ ಔಷಧಿಗಳನ್ನು ವಿತರಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಪರಿಶೀಲನೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.