21.6 C
Sullia
Sunday, March 8, 2026

ಚಿಕ್ಕೋಡಿ: ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ನ್ಯೂಸ್ ನಾಟೌಟ್ : ದ್ವಿತೀಯ ಪಿಯುಸಿ ಪರೀಕ್ಷೆ-1 (2nd PUC Exam) ಇಂದಿನಿಂದ ಶುರುವಾಗುತ್ತಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಎಲ್ಲರೂ ಬೆಳಗ್ಗೆಯೇ ಸಂತಸದಿಂದ ಪರೀಕ್ಷೆಗೆ ಹಾಜರಾಗಿದ್ದಾರೆ. ಆದ್ರೆ ಚಿಕ್ಕೋಡಿಯ ಬಂಬಲವಾಡ ಗ್ರಾಮದಲ್ಲಿ ನಡೆದಿದ್ದೇ ಬೇರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಕಲ ತಯಾರಿ ಮಾಡಿಕೊಂಡು, ಭವಿಷ್ಯದ ನೂರಾರು ಕನಸು ಕಟ್ಟಿಕೊಂಡು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ಬಂಬಲವಾಡ ಗ್ರಾಮದಲ್ಲಿ ಭೂಮಿಕಾ ಮಾಳಂಗಿ (17) ಮೃತ ದುರ್ದೈವಿ.

ಪರೀಕ್ಷೆಗೆ (Exam) ಸಕಲ ತಯಾರಿ ಮಾಡಿಕೊಂಡಿದ್ದ ಭೂಮಿಕಾ ಇಂದು ಉತ್ಸಾಹದಿಂದಲೇ ಪರೀಕ್ಷೆಗೆ ಹೊರಡಲು ತಯಾರಾಗಿದ್ದರು. ಆದ್ರೆ ವಿಧಿಯ ಆಟ ಬೇರೆಯೇ ಆಗಿತ್ತು. ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದಾಗಲೇ ಹಠಾತ್ತನೇ ಹೃದಯಾಘಾತ ಸಂಭವಿಸಿದೆ. ಕೂಡಲೇ ಪೋಷಕರು ಆಕೆಯನ್ನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು, ಆದಾಗ್ಯೂ ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles