ನ್ಯೂಸ್ ನಾಟೌಟ್ : ದೇಶದಾದ್ಯಂತ ರೈತರು ಕಂಗಾಲಾಗಿದ್ದಾರೆ.ಮಳೆ ಬಾರದೇ ಆಕಾಶದತ್ತ ಮುಖ ಮಾಡುವಂತಾಗಿದೆ. ಮಾನ್ಸೂನ್ ನಿಧಾನವಾಗಿದೆ. ಕೆಲವೆಡೆ ಉತ್ತಮ ಮಳೆಯಾಗಿದ್ದರೂ ಕೆಲವೆಡೆ ಮಳೆಯೇ ಬರುತ್ತಿಲ್ಲ.
ಕರ್ನಾಟದಲ್ಲಿ ಜುಲೈ ತಿಂಗಳ ಮಧ್ಯದಲ್ಲಿ ಅಬ್ಬರಿಸಿದ್ದ ಮಳೆರಾಯ ಆ ಬಳಿಕ ಮಾಯವಾಗಿದ್ದಾನೆ.ಜಲಾಶಯಗಳ ನೀರಿನ ಮಟ್ಟದಲ್ಲೂ ಇದೀಗ ಬಾರಿ ಇಳಿಕೆ ಕಂಡುಬರುತ್ತಿದ್ದು ಸ್ಥಿತಿ ಶೋಚನೀಯವಾಗುವ ಹಂತಕ್ಕೆ ತಲುಪಿದೆ.ಆಗಸ್ಟ್ ಆರಂಭದಿಂದಲೂ ಇಲ್ಲಿಯವರೆಗೆ ಮಳೆ ಆರ್ಭಟ ಕಡಿಮೆಯಾಗಿದ್ದು,ಮತ್ತೆ ಆರಂಭವಾಗುವ ನಿರೀಕ್ಷೆಯಿದೆ.ಇಲಾಖೆ ಮುನ್ಸೂಚನೆ ಪ್ರಕಾರ ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ ಎಂದು ಹೇಳಲಾಗುತ್ತಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.