ನ್ಯೂಸ್ ನಾಟೌಟ್ : ಕೆಪಿಸಿಸಿ (KPCC) ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷೆ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳನ್ನು ಪ್ರಕಟಿಸುವವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ನಗರದ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಘಟಕ ಸ್ಥಾಪಿಸಿದ್ದು, ಸುಳ್ಳು ಸುದ್ದಿ ತಡೆ, ಸಾಮಾಜಿಕ ಸಾಮರಸ್ಯ ಕದಡುವ ವಿಡಿಯೋ, ಬರಹಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವವರ ಪತ್ತೆಗೆ ಪ್ರತ್ಯೇಕ ಘಟಕ ಸ್ಥಾಪಿಸುವ ಬಗ್ಗೆ ರಾಜ್ಯ ಸರ್ಕಾರ ಪ್ರಸ್ತಾಪಿಸಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಈ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಿದ್ದರು.ಈಗ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿಭಾಯಿಸುವ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತ ಮತ್ತು ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.
ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಫೇಸ್ಬುಕ್ನಲ್ಲಿ ಅವಾಚ್ಯ ಶಬ್ದದಿಂದ ನಿಂಧಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸೌಂಗಧಿಕಾ ಅವರು ಪಕ್ಷದ ಕಾರ್ಯಕರ್ತೆಯರೊಂದಿಗೆ ವಿನೋಬನಗರ ಪೊಲೀಸ್ ಠಾಣೆ ತೆರಳಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 504, 509ರ ಅಡಿ ಎಫ್ಐಆರ್ ದಾಖಲಾಗಿದೆ.