ನ್ಯೂಸ್ ನಾಟೌಟ್: ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವನ್ನು ಕಾಪಾಡಲು ಕ್ರೀಡೆ ಬಹಳ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ತಮ್ಮ ದೈನಂದಿನ ಜೀವನದಲ್ಲಿ ಕ್ರೀಡೆಗೂ ಸ್ವಲ್ಪ ಸಮಯ ಮೀಸಲಿಡಬೇಕು. ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹೇಳಿದರು.
ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಸಹ ಸಂಸ್ಥೆಗಳ ವತಿಯಿಂದ ಹಾಕಿ ಆಟಗಾರ ಧ್ಯಾನ್ಚಂದ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ.ವಿ.ಜಿ. ಮೆಡಿಕಲ್ ಕಾಲೇಜು, ಕೆ.ವಿ.ಜಿ. ನರ್ಸಿಂಗ್ ಕಾಲೇಜು, ಕೆ.ವಿ.ಜಿ. ಫಿಸಿಯೋಥೆರಪಿ ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಕ್ರೀಡಾಕೂಟವನ್ನು ಸೋಮವಾರ (ಆ.28ರಂದು) ಉದ್ಘಾಟಿಸಿ ಮಾತನಾಡಿದರು.
ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ಕಾಲೇಜಿನ ಕ್ರೀಡಾ ಸಂಚಾಲಕ ಡಾ. ರವಿಕಾಂತ್, ಕೆ.ವಿ.ಜಿ. ಜನರಲ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಚಂದ್ರಾವತಿ, ಕೆ.ವಿ.ಜಿ. ಫಿಸಿಯೋಥೆರಪಿ ವಿಭಾಗದ ಪ್ರಾಂಶುಪಾಲ ಸಾಯಿರಾಂ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ದೈಹಿಕ ನಿರ್ದೇಶಕ ಮಿಥುನ್, ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ. ನವ್ಯ, ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಶ್ರೀಹರಿ, ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀವತ್ಸ ಮ್ಯಾಗಜಿನ್ ಕಾರ್ಯದರ್ಶಿ ಲೇಖನ್ ಉಪಸ್ಥಿತರಿದ್ದರು. ಕಾಲೇಜಿನ ಫಾರ್ಮಕಾಲಜಿ ಪ್ರೊಫೆಸರ್ ಡಾ. ಸವಿನ್ ಫಿಟ್ ಇಂಡಿಯಾ ಪ್ರತಿಜ್ಞೆ ಬೋಧಿಸಿದರು. ವಿದ್ಯಾರ್ಥಿನಿ ಶಮಾ ಪ್ರಾರ್ಥಿಸಿದರು. ನಿಕ್ಷೇತ್ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.