ನ್ಯೂಸ್ ನಾಟೌಟ್ : ಸಾರ್ವಜನಿಕ ಸ್ಥಳದಲ್ಲಿ ಹಣ ಪಣಕ್ಕಿಟ್ಟು ಲೂಡೋ ಆಡುತ್ತಿದ್ದಾರೆಂಬ ಆರೋಪದಡಿಯಲ್ಲಿ ಸುಬ್ರಹ್ಮಣ್ಯ ಪೊಲೀಸರು ದಾಳಿ ಮಾಡಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಬಸ್ಸು ನಿಲ್ದಾಣದ ಬಳಿ ನಡೆದಿದೆ.
ಹಣ ಪಣಕ್ಕಿಟ್ಟು ಲೂಡೋ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಪೊಲೀಸರು ದಿಡೀರ್ ದಾಳಿ ನಡೆಸಿದ್ದಾರೆ.ಈ ಸಂದರ್ಭ ಓರ್ವನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಯಾವುದೇ ಪರವಾನಿಗೆ ಇಲ್ಲದೇ ಲೂಡೋ ಆಡುತ್ತಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇದೇ ವೇಳೆ ಆಟದಲ್ಲಿ ನಿರತರಾಗಿದ್ದ ಮೂವರು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.
ದಾಳಿ ವೇಳೆ 1,350 ರೂಪಾಯಿ ನಗದು, ಆಟಕ್ಕೆ ಉಪಯೋಗಿಸಿದ ಲೂಡೋ ದಾಳ-1, ಲೂಡೋ ಬೋರ್ಡ್ ನ್ನು ಪೊಲೀಸರು ವಶ ಪಡಿಸಿಕೊಂಡು ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ .