ನ್ಯೂಸ್ ನಾಟೌಟ್ :ಯುವತಿಯೋರ್ವಳು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಘಟನೆ ಬಂಟ್ವಾಳದಿಂದ ವರದಿಯಾಗಿದೆ.ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ವಿಡಿಯೋ ಮಾಡಲು ಮುಂದಾಗಿದ್ದಾನೆ.
ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದು ಯುವತಿಯ ಗಮನಕ್ಕೆ ಬರುತ್ತಿದ್ದಂತೆ ಆಕೆ ಜೋರಾಗಿ ಬೊಬ್ಬೆ ಹಾಕಿದ್ದಾಳೆ.ಅಪರಿಚಿತ ಆರೋಪಿ ವ್ಯಕ್ತಿಯು ಅಲ್ಲಿಂದ ಓಡಿಹೋಗಿ ಪರಾರಿಯಾಗಿದ್ದ.
ಯುವತಿಯ ಬೊಬ್ಬೆ ಕೇಳಿ ತಾಯಿ ಹಾಗೂ ನೆರೆಮನೆಯವರು ಓಡಿ ಬಂದು ವಿಷಯ ಕೇಳಿದರು.ತಕ್ಷಣವೇ ಓಡಿಹೋದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ.ಆದರೆ ಆತನ ಪತ್ತೆಯಾಗಿರಲಿಲ್ಲ.ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬವನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಪ್ರಕರಣ ದಾಖಲಾದ ಬೆನ್ನಲ್ಲೆ ಪೋಲೀಸರು ಕಾರ್ಯಚರಣೆ ಪ್ರಾರಂಭಿಸಿದ್ದರು.ಸಂಶಯದ ಮೇಲೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಈತ ಸತ್ಯ ಬಾಯಿಬಿಟ್ಟಿದ್ದಾನೆ ಎಂಬುದು ತಿಳಿದು ಬಂದಿದೆ.ಈತನ ಈ ಕೆಟ್ಟ ಚಾಳಿಯ ಬಗ್ಗೆ ಪೋಲೀಸರು ತನಿಖೆ ನಡೆಸುತ್ತಿದ್ದು, ಈತನಿಂದ ಇಂತಹ ಕೃತ್ಯಗಳು ಬೇರೆ ಎಲ್ಲಿಯಾದರೂ ಆಗಿದೆಯಾ ಅನ್ನುವ ತನಿಖೆಗಳು ನಡೆಯುತ್ತಿದೆ ಎನ್ನಲಾಗಿದೆ.ಸದ್ಯ ಯಾವುದೇ ಸ್ಪಷ್ಟವಾದ ಮಾಹಿತಿ ತಿಳಿದು ಬಂದಿಲ್ಲ.ಪೋಲೀಸ್ ತನಿಖೆಯ ಬಳಿಕ ಈತನ ಸಂಪೂರ್ಣ ಮಾಹಿತಿ ನೀಡಲಿದ್ದೇವೆ ಎಂದು ಹೇಳಿದ್ದಾರೆ.