ನ್ಯೂಸ್ ನಾಟೌಟ್ : ಕೆಎಸ್ಆರ್ಟಿಸಿ ಡಿಪೋದ ಸಿಬ್ಬಂದಿಯೊಬ್ಬರು ವಿಷ ಸೇವಿಸಿದ ಘಟನೆ ಮಡಿಕೇರಿಯಿಂದ ವರದಿಯಾಗಿದೆ.
ಡಿಪೋದಲ್ಲಿ ಕಿರಿಯ ಸಹಾಯಕ ರಾಗಿ ಸೇವೆ ಸಲ್ಲಿಸುತ್ತಿದ್ದ ಹೆಬ್ಟಾಲೆ ಗ್ರಾಮದ ನಿವಾಸಿ ಅಭಿಷೇಕ್ ವಿಷ ಸೇವಿಸಿದ್ದ ವ್ಯಕ್ತಿ.ಸದ್ಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಅಧಿಕಾರಿಯ ಕಿರುಕುಳದಿಂದ ಬೇಸತ್ತು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಆರೋಪಿಸಲಾಗಿದೆ.ಸದ್ಯ ಅಭಿಷೇಕ್ ಅವರು ಚಿಕಿತ್ಸೆಯಲ್ಲಿದ್ದು,ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕವಷ್ಟೇ ಇವರ ಹೇಳಿಕೆ ಮೂಲಕ ನಿಖರ ಮಾಹಿತಿ ಲಭಿಸಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.