ನ್ಯೂಸ್ ನಾಟೌಟ್: ಸೌಜನ್ಯ ನ್ಯಾಯಕ್ಕಾಗಿ ರಾಜ್ಯದ ಉದ್ದಗಲಕ್ಕೂ ಪ್ರತಿಭಟನೆಯ ಕಿಚ್ಚು ಹೊತ್ತಿಕೊಂಡಿದೆ. ಸಾವಿರಾರು ಸಂಖ್ಯೆಯಲ್ಲಿಂದು ಜನ ಸೌಜನ್ಯಳಿಗೆ ನ್ಯಾಯ ಸಿಗಬೇಕು ಅನ್ನುವ ಪ್ರಾರ್ಥನೆ ಮಾಡುತ್ತಿದ್ದಾರೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ರಾಜ್ಯದ ಜೊತೆಗೆ ಹೊರ ರಾಜ್ಯದಲ್ಲೂ ಸೌಜನ್ಯ ಪರ ನ್ಯಾಯದ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಕುಕ್ಕೆ ಶ್ರೀಸುಬ್ರಹ್ಮಣ್ಯದಲ್ಲೂ ಸೌಜನ್ಯ ಪರವಾದ ಧ್ವನಿ ಮೊಳಗಿದೆ. ಹೌದು, ಗುರುವಾರ ಬೆಳಗ್ಗೆ ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ಮೌನ ಮೆರವಣಿಗೆ ಆರಂಭವಾಗಿದೆ.
ತಿಮರೋಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಕುಮಾರಧಾರದ ಬಳಿ ತೆಂಗಿನ ಕಾಯಿ ಒಡೆದು ಚಾಲನೆ ನೀಡಿದರು.
ಸೌಜನ್ಯಳ ನ್ಯಾಯಕ್ಕಾಗಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಸೌಜನ್ಯಳ ತಾಯಿ ಕುಸುಮಾವತಿ ಕೂಡ ಭಾಗಿಯಾಗಿದ್ದರು.
ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಜೆಸಿಐ ಸುಬ್ರಹ್ಮಣ್ಯ, ಬಿಎಂಎಸ್ ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ, ಕುಕ್ಕೇ ಶ್ರೀ ಆಟೋ ಚಾಲಕ ಮಾಲಕ ಸಂಘ, ಕುಕ್ಕೇ ಶ್ರೀ ಟ್ಯಾಕ್ಸಿ ಚಾಲಕ ಮಾಲಕ ಸಂಘ, ಸಂಜೀವಿನಿ ಒಕ್ಕೂಟ, ರವಿಕಕ್ಕೆಪದವು ಸಮಾಜ ಸೇವ ಟ್ರಸ್ಟ್, ಸುಬ್ರಹ್ಮಣ್ಯ ವರ್ತಕರ ಸಂಘ, ಗೌಡ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಸ್ಥಳೀಯರು ಭಾಗವಹಿಸಿದರು