22.4 C
Sullia
Saturday, March 7, 2026

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು !ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಡಿದ್ರು!!

ನ್ಯೂಸ್ ನಾಟೌಟ್ : ಪರೀಕ್ಷೆ ಅಂದ್ರೆ ಸಾಕು ಕೆಲವರಿಗೆ ಇನ್ನಿಲ್ಲದ ಭಯ. ಮನೆಯಲ್ಲಿ ಫೇಲಾದ್ರೆ ಪೋಷಕರು ಬೈಯುತ್ತಾರೆ ಅನ್ನೊ ಭಯ ಬೇರೆ. ಈ ಪರೀಕ್ಷಾ ಭಯ ಏನೆಲ್ಲಾ ಮಾಡಿಸುತ್ತೆ ಅನ್ನೋದಕ್ಕೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಸೀನಿಯರ್ ವಿದ್ಯಾರ್ಥಿನಿಯೊಬ್ಬಳು ತನ್ನ ಜೂನಿಯರ್ ಜೊತೆ ನಾಪತ್ತೆಯಾಗಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿದೆ. ದ್ವಿತೀಯ ಪಿಯುಸಿಯ ತನಿಷ್ಕಾ ಮತ್ತು ಪ್ರಥಮ ಪಿಯುಸಿಯ ತೇಜಸ್ವಿನಿ ಜ.31ರಿಂದಲೇ ನಾಪತ್ತೆಯಾದವರು. ಇವರಿಬ್ಬರು ಹೋಗುವಾಗ ತಮ್ಮ ಮೊಬೈಲ್ ಫೋನ್, ಎಟಿಎಂ ಕಾರ್ಡ್ ಅಥವಾ ಯಾವುದೇ ಹಣವನ್ನು ಕೊಂಡೊಯ್ದಿಲ್ಲ. ಕೇವಲ ಕಾಲೇಜು ಬ್ಯಾಗ್ ಮತ್ತು ಆಧಾರ್ ಕಾರ್ಡ್ ಮಾತ್ರ ಹಿಡಿದು ಪರಾರಿಯಾಗಿದ್ದಾರೆ. ತನಿಷ್ಕಾ ಕಳೆದ ವರ್ಷವೂ ಪರೀಕ್ಷೆ ತಪ್ಪಿಸಲು ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳಂತೆ. ಈ ಬಾರಿ ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ಜೂನಿಯರ್ ತೇಜಸ್ವಿನಿಯನ್ನ ಕರೆದುಕೊಂಡು ಎಸ್ಕೇಪ್ ಆಗಿದ್ದಾಳೆ. 

ಕೆಲ ದಿನಗಳ ಹಿಂದೆ ಗೆಳೆತಿಯರಿಗೆ ಕರೆ ಮಾಡಿದ್ದ ಇವರು, ತಾವು ಮಹದೇಶ್ವರ ಬೆಟ್ಟದಲ್ಲಿ ಇರುವುದಾಗಿ ಹೇಳಿದ್ದರು. ಆದರೆ ಅದಾದ ನಂತರ ಇವರ ಸುಳಿವೇ ಇಲ್ಲದಂತಾಗಿದೆ. ಇತ್ತ ಪೊಲೀಸರು ಸುಮಾರು 50ಕ್ಕೂ ಹೆಚ್ಚು ಕಡೆ ತಲಾಶ್ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇಬ್ಬರೂ ಆಧಾರ್ ಕಾರ್ಡ್ ತೋರಿಸಿ ಉಚಿತ ಬಸ್‌ಗಳಲ್ಲಿ ರಾಜ್ಯಾದ್ಯಂತ ಸುತ್ತುತ್ತಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮಕ್ಕಳು ಪತ್ತೆಯಾಗದ ಹಿನ್ನೆಲೆ ಪೋಷಕರು ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ, ವಿದ್ಯಾರ್ಥಿನಿಯರನ್ನು ಹುಡುಕಲು ಪೊಲೀಸರಿಗೆ ಒಂದು ವಾರದ ಕಾಲಾವಕಾಶ ನೀಡಿದೆ. ಇತ್ತ ಕರುಳ ಕುಡಿಗಳಿಗಾಗಿ ಪೋಷಕರು ಹಗಲು, ರಾತ್ರಿ ಕಣ್ಣೀರು ಹಾಕುತ್ತಿದ್ದಾರೆ.

ಇನ್ನೂ ವಿದ್ಯಾರ್ಥಿನಿಯರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ನಾಪತ್ತೆಯಾದವರ ಹುಡುಕಾಟದಲ್ಲಿ ತೊಡಗಿದ್ದಾರೆ. ಒಟ್ಟಿನಲ್ಲಿ, ಪರೀಕ್ಷೆಯ ಒತ್ತಡ ವಿದ್ಯಾರ್ಥಿಗಳನ್ನು ಯಾವ ಹಂತಕ್ಕೆ ಕೊಂಡೊಯ್ಯುತ್ತಿದೆ ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles