21.6 C
Sullia
Sunday, March 8, 2026

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟ್ ದೇವರು ಸಚಿನ್ ಪುತ್ರ ಅರ್ಜುನ್, ಗಣ್ಯರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನಡೆದ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ, ಯುವ ಕ್ರಿಕೆಟಿಗ ಮುಂಬೈನಲ್ಲಿ ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಂದೋಕ್ ಪರಸ್ಪರ ಹಾರ ಬದಲಿಸಿಕೊಂಡು ಹೊಸ ಜೀವನ ಆರಂಭಿಸಿದರು. ಈ ವಿವಾಹ ಮಹೋತ್ಸವವು ಕ್ರಿಕೆಟ್, ಸಿನಿಮಾ ಮತ್ತು ಉದ್ಯಮ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ಜರುಗಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ದಕ್ಷಿಣ ಮುಂಬೈನ ಖಾಸಗಿ ವೇದಿಕೆಯೊಂದರಲ್ಲಿ ನಡೆದ ಈ ಸಮಾರಂಭದಲ್ಲಿ ಕುಟುಂಬಸ್ಥರು ಮತ್ತು ಅತ್ಯಂತ ಆಪ್ತರು ಭಾಗವಹಿಸಿದ್ದರು. ಕಳೆದ ವರ್ಷ ಆಗಸ್ಟ್ 25 ರಂದು ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಕಳೆದ ಕೆಲವು ವಾರಗಳಿಂದ ಮೆಹೆಂದಿ ಮತ್ತು ಸಂಗೀತ ಸೇರಿದಂತೆ ವಿವಿಧ ಪ್ರೀ-ವೆಡ್ಡಿಂಗ್ ಕಾರ್ಯಕ್ರಮಗಳು ನಡೆದಿದ್ದವು. ಅಂಬಾನಿ ಕುಟುಂಬದ ಆತಿಥ್ಯದಲ್ಲಿ ಜಾಮ್‌ನಗರದಲ್ಲೂ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಾಜಿ ನಾಯಕ ಎಂ.ಎಸ್. ಧೋನಿ ತಮ್ಮ ಪತ್ನಿ ಸಾಕ್ಷಿ ಅವರೊಂದಿಗೆ ಆಗಮಿಸಿ ಎಲ್ಲರ ಗಮನ ಸೆಳೆದರು.ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಅವರು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಬಿಡುವು ಮಾಡಿಕೊಂಡು ಪತ್ನಿ ನತಾಶಾ ಅವರೊಂದಿಗೆ ಆಗಮಿಸಿದ್ದರು.

ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ರವಿಶಾಸ್ತ್ರಿ, ದಿಲೀಪ್ ವೆಂಗ್‌ಸರ್ಕರ್ ಮತ್ತು ವೆಂಕಟೇಶ್ ಪ್ರಸಾದ್ ಅವರಂತಹ ಹಿರಿಯ ಕ್ರಿಕೆಟಿಗರು ನವಜೋಡಿಗೆ ಶುಭ ಹಾರೈಸಿದರು.

Related Articles

LEAVE A REPLY

Please enter your comment!
Please enter your name here

Latest Articles