21.6 C
Sullia
Sunday, March 8, 2026

ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ: ಭಾರೀ ನಿರೀಕ್ಷೆ

ನ್ಯೂಸ್ ನಾಟೌಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ತಮ್ಮ ದಾಖಲೆಯ 17ನೇ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ವಿಧಾನಸೌಧದಲ್ಲಿ ಮಂಡನೆಯಾದ ಈ ಐತಿಹಾಸಿಕ ಬಜೆಟ್ ರಾಜ್ಯದ ಆರ್ಥಿಕತೆಗೆ ಹೊಸ ದಿಕ್ಕು ನೀಡಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಸಿಎಂ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಒಟ್ಟು 7 ಬಜೆಟ್ ಮಂಡನೆ ಮಾಡಿದ್ದರೆ, ಮುಖ್ಯಮಂತ್ರಿಯಾಗಿ ಈವರೆಗೆ 9 ಬಜೆಟ್ ಮಂಡನೆ ಮಾಡಿದ್ದಾರೆ‌. 2023-24ರಲ್ಲಿ ಬಜೆಟ್ ಮಂಡನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ರಾಮಕೃಷ್ಣ ಹೆಗಡೆಯವರ ಅತಿ ಹೆಚ್ಚು ಬಜೆಟ್ ಮಂಡನೆ ದಾಖಲೆಯನ್ನು ಮುರಿದಿದ್ದರು.

2025-26ನೇ ಸಾಲಿನಲ್ಲಿ ಸಿಎಂ ಸಿದ್ದರಾಮಯ್ಯ 4.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದರು. ಸುಮಾರು 19,262 ಕೋಟಿ ಅಂದಾಜು ಆದಾಯ ಕೊರತೆಯ ಬಜೆಟ್ ಮಂಡನೆ ಮಾಡಿದ್ದರು. ಸುಮಾರು 1,16,000 ಕೋಟಿ ರೂ. ಸಾಲದ ಮೊರೆ ಹೋಗಿದ್ದರು. ಈ ಬಾರಿ ಸಿಎಂ ಸಿದ್ದರಾಮಯ್ಯ ಇತಿ ಮಿತಿಯೊಳಗೆ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ವಾಸ್ತವದ ಲೆಕ್ಕಚಾರದೊಂದಿಗೆ ಅಭಿವೃದ್ಧಿಗೂ ಪೂರಕವಾಗಿ ಬಜೆಟ್ ಮಂಡನೆ ಮಾಡುವ ನಿರೀಕ್ಷೆ ಇದೆ.

Related Articles

LEAVE A REPLY

Please enter your comment!
Please enter your name here

Latest Articles