ನ್ಯೂಸ್ ನಾಟೌಟ್ : ಎರಡು ದಿನಗಳ ಹಿಂದೆ ಕೊಡಗಿನ ಕೆದಕಲ್ ನಲ್ಲಿ ಅರಣ್ಯ ಸಿಬ್ಬಂದಿಯನ್ನು ಕೊಂದು ಹಾಕಿದ್ದ ಪುಂಡ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಗಿರೀಶ್ ಎಂಬವರನ್ನು ಸೋಮವಾರ ಕೆದಕಲ್ ಬಳಿ ಕೊಂದು ಹಾಕಿತ್ತು.
ಈ ಪುಂಡ ಆನೆ ದಾರಿಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಹಾಗೂ ಮತ್ತೊಬ್ಬ ವ್ಯಕ್ತಿಯ ಮೇಲೆ ದಾಳಿ ಮಾಡಿತ್ತು. ಇದನ್ನು ಕಾಡಿಗೆ ಓಡಿಸುವುದಕ್ಕಾಗಿ ಅರಣ್ಯ ಸಿಬ್ಬಂದಿ ಆಗಮಿಸಿದ್ದರು. ಈ ವೇಳೆ ಸಿಬ್ಬಂದಿ ಗಿರೀಶ್ ಮೇಲೆ ಆನೆ ದಾಳಿ ನಡೆಸಿತ್ತು. ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.
ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಸಿಗಬೇಕು ಎಂದು ಕುಟುಂಬದ ಪರವಾಗಿ ಮಡಿಕೇರಿ ಶಾಸಕ ಮಂಥರ್ ಹೇಳಿದ್ದರು. ಈ ಬೆನ್ನಲ್ಲೇ ಕಾಡಾನೆಯನ್ನು ಸೆರೆ ಹಿಡಿಯಬೇಕು ಅನ್ನುವ ಒತ್ತಾಯ ಕೇಳಿಬಿದ್ದಿತ್ತು. ಹೀಗಾಗಿ ದುಬಾರೆಯಿಂದ ಐದು ಸಾಕಾನೆಗಳನ್ನು ತರಿಸಲಾಗಿತ್ತು. ಇವುಗಳ ಸಹಾಯದಿಂದ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು.