ನ್ಯೂಸ್ ನಾಟೌಟ್ : ವ್ಯಕ್ತಿಯೋರ್ವ ಮಹಿಳೆಯ ಜೊತೆ ಬಸ್ ನಲ್ಲಿ ಪ್ರಯಾಣಿಸುವಾಗ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ತಾನು ಪುತ್ತೂರಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ತನ್ನ ಪಕ್ಕದಲ್ಲಿದ್ದ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದು,ಇನ್ನೇನು ಮನೆ ತಲುಪುತ್ತಿದ್ದಂತೆಯೇ ಬಸ್ನಿಂದ ಇಳಿಯುವ ವೇಳೆ ಚೀಟಿಯೊಂದರಲ್ಲಿ ಮೊಬೈಲ್ ನಂಬರನ್ನು ನೀಡಿ ಕರೆ ಮಾಡುವಂತೆ ಕೈ ಸನ್ನೆ ಮಾಡಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಇದನ್ನು ಟ್ವೀಟ್ ಮೂಲಕವೂ ಮಹಿಳೆ ಹೇಳಿಕೊಂಡಿದ್ದರು
ಮಹಿಳೆ ಕಿರುಕುಳ ನೀಡಿದವನ ನಂಬರ್ ಅನ್ನು ಪೊಲೀಸರಿಗೆ ನೀಡಿದ್ದಾರೆ.ಈ ಆಧಾರದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಈ ಬಗ್ಗೆ ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.