ನ್ಯೂಸ್ ನಾಟೌಟ್: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಭಾರೀ ಪ್ರಮಾಣದಲ್ಲಿ (Dengue Cases increasing) ಏರುತ್ತಿದೆ. ಕೆಲವೇ ಕೆಲವು ದಿನಗಳಲ್ಲಿ ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ಕಂಡು ಬಂದಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ.
ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ತಿಳಿಸಿದ್ದಾರೆ.