37.3 C
Sullia
Sunday, March 8, 2026

ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ನ್ಯೂಸ್ ನಾಟೌಟ್ : ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಈ ನಾಚಿಕೆಗೇಡಿನ ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ಮಧು ರೈ, ಪಾಠ ಮಾಡುವ ಬದಲು, ತರಗತಿಯಲ್ಲಿ ವಿದ್ಯಾರ್ಥಿನಿಯೊಬ್ಬಳಿಂದ ಮಸಾಜ್ ಮಾಡಿಸಿಕೊಂಡಿದ್ದಾಳೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಶಿಕ್ಷಕಿ ಮಧು ರೈ ತರಗತಿಯ ನೆಲದ ಮೇಲೆ ಮಲಗಿದ್ದು, ಸುತ್ತ ಇರುವ ಪುಟ್ಟ ಬಾಲಕಿಯರು ಶಿಕ್ಷಕಿಯ ಕಾಲುಗಳನ್ನು ಒತ್ತುತ್ತಿರುವ ದೃಶ್ಯ ಸೆರೆಯಾಗಿದೆ. ಜ್ಞಾನದ ದೀಪ ಬೆಳಗಬೇಕಾದ ಗುರುವೇ, ಮಕ್ಕಳನ್ನು ಇಂತಹ ಕೀಳು ಕೆಲಸಗಳಿಗೆ ಬಳಸಿಕೊಂಡಿರುವುದು ಪೋಷಕರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

 ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ, ಕೂಡಲೇ ತನಿಖೆಗೆ ಆದೇಶಿಸಿದೆ. ಚಿತ್ರಕೂಟದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಗಳು (BSA) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಲು ಮುಂದಾಗಿರುವುದು ವರದಿಯಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles