ನ್ಯೂಸ್ ನಾಟೌಟ್: ಹೆಣ್ಣು ಮತ್ತು ಮಣ್ಣನ್ನು ಪೂಜಿಸುವ ಸಮಾಜದಿಂದ ಮಾತ್ರ ಉನ್ನತಿ ಸಾಧಿಸಲು ಸಾಧ್ಯ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ನಗರ ಪಂಚಾಯತ್ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ, ಶಾಲಾ ಆರೋಗ್ಯ ಕೇಂದ್ರ, ಸರ್ಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಮುಟ್ಟು ಗುಟ್ಟಲ್ಲ- ಆರೋಗ್ಯ ಅರಿವು ಕಾರ್ಯಕ್ರಮ ಹಾಗೂ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಮರು ಬಳಕೆಯ ಪ್ಯಾಡ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಟ್ಟು ಎಂಬುದು ಪ್ರಕೃತಿ ನಿಯಮ. ಇದರ ಬಗ್ಗೆ ಅರಿವು ಅಗತ್ಯ. ವಿದ್ಯಾರ್ಥಿನಿಯರಲ್ಲಿ ಪರಿಸರದ ಬಗ್ಗೆ ಜಾಗೃತಿ ಬೇಕು. ಶುಚಿತ್ವದ ಬಗ್ಗೆ ಕಾಳಜಿ ಇರಬೇಕು ಎಂದರು.
ಡಾ.ವೀಣಾ ಆರೋಗ್ಯ ಮಾಹಿತಿ ನೀಡಿದರು. ಸೈಂಟ್ ಬ್ರಿಜಿಡ್ಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ. ವಿಕ್ಟರ್ ಡಿಸೋಜ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ನಗರ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಭಟ್ ಕೊಡೆಂಕಿರಿ, ಶರೀಫ್ ಕಂಠಿ, ಧೀರಾ ಕ್ರಾಸ್ತಾ, ಬುದ್ಧ ನಾಯ್ಕ ನಾರಾಯಣ ಶಾಂತಿನಗರ, ಶೀಲಾ ಅರುಣ ಕುರುಂಜಿ, ಕಿಶೋರಿ ಶೇಟ್, ಪ್ರವಿತಾ ಪ್ರಶಾಂತ್, ಶಶಿಕಲಾ ನೀರಬಿದಿರೆ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಚ್.ಎಂ. ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ತಕಾಶ್ ಮೂಡಿತ್ತಾಯ, ಎಸ್ಡಿಎಂಸಿ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ, ಉದ್ಯಮಿ ಪ್ರಭಾಕರನ್ ನಾಯರ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸವಿತಾ ನಾರ್ಕೋಡು, ಶ್ರೀ ಶಾರದಾ ಕಾಲೇಜಿನ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಭಾರತಿ, ಕೋಲ್ಚಾರ್ ಸ.ಹಿ.ಪ್ರಾ ಶಾಲಾ ಶಿಕ್ಷಕಿ ಜಲಜಾಕ್ಷಿ ಉಪಸ್ಥಿತರಿದ್ದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್.ಸ್ವಾಗತಿಸಿ, ಸುಳ್ಯ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ಕೆ.ವಂದಿಸಿ, ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.