ನ್ಯೂಸ್ ನಾಟೌಟ್: ಅಜ್ಜಾವರದಲ್ಲಿ ಚಿರತೆ ಸಾವು ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಅಜ್ಜಾವರ ಗ್ರಾಮದ ಪಡ್ಡಂಬೈಲಿನಲ್ಲಿ ಆಗಸ್ಟ್ 29 ರಂದು ಉರುಳಿಗೆ ಚಿರತೆಯೊಂದು ಬಿದ್ದು ಮೃತಪಟ್ಟಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಯರಾಮ ಹಾಗೂ ಪೃಥ್ವಿ ಎಂಬುವರ ವಿರುದ್ಧ ಸುಳ್ಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಅದರಂತೆ ಇಬ್ಬರ ಬಂಧನವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿರುವುದಾಗಿ ತಿಳಿದುಬಂದಿದೆ.
ಆರೋಪಿಗಳ ಪರವಾಗಿ ಸುಳ್ಯದ ಹಿರಿಯ ನ್ಯಾಯವಾದಿಗಳಾದ ನಾರಾಯಣ ಕೆ, ಚಂದ್ರಶೇಖರ, ವಿಫುಲ್, ಅನಿತಾ ವಾದಿಸಿದ್ದಾರೆ.