ನ್ಯೂಸ್ ನಾಟೌಟ್ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಬಂಧನದಲ್ಲಿರುವ ಚೈತ್ರಾ ಕುಂದಾಪುರ ಅನಾರೋಗ್ಯದ ಹಿನ್ನಲೆ ಇಂದು(ಶುಕ್ರವಾರ) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಅವರು ಸಿಸಿಬಿ ಪೊಲೀಸರ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಸಂಗತಿಯೂ ಬೆಳಕಿಗೆ ಬಂದಿದೆ.
ಈಕೆಯ ಹೈಡ್ರಾಮಾದಿಂದಾಗಿ ಪೊಲೀಸರಿಗೆ ಇದುವರೆಗೂ ಒಂದು ಪುಟ ಹೇಳಿಕೆಯನ್ನೂ ದಾಖಲು ಮಾಡಲು ಸಾಧ್ಯವಾಗಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದ್ದು,ನಾನೇನು ಮಾಡಿಲ್ಲ, ಎಲ್ಲವೂ ಸ್ವಾಮೀಜಿಗೆ ಗೊತ್ತು ಎಂದು ಮಾತ್ರ ಹೇಳುತ್ತಿದ್ದು,ಪ್ರತಿಯೊಂದಕ್ಕೂ ಅಳುವುದು ಮತ್ತು ಕೂಗಾಡುವುದು ಮಾಡುತ್ತಿದ್ದಾಳೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ವಿಚಾರಣೆ ವೇಳೆ ಚೈತ್ರಾ ಮೂರ್ಛೆ ತಪ್ಪಿ ಕೆಳಗೆ ಬಿದ್ದಿದ್ದಾಳೆ. ಆಕೆಯನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗಿದೆ.ಕುತ್ತಿಗೆಗೂ ವೇಲ್ ಸುತ್ತಿಕೊಂಡು ಮೂರ್ಛೆ ಹೋಗಿದ್ದಾಳೆ ಎನ್ನಲಾಗಿದೆ. ಅಲ್ಲದೆ, ಆಕೆಯ ಬಾಯಿಯಲ್ಲಿ ನೊರೆಯು ಸಹ ಬಂದಿದೆ.
ಚೈತ್ರಾ ಕುಂದಾಪುರಗೆ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಮೂರ್ಚೆ ರೋಗದ ಯಾವುದೇ ಲಕ್ಷಣ ಕಂಡು ಬಂದಿಲ್ಲ ಎಂದು ವಿಕ್ಟೋರಿಯಾ ವೈದ್ಯರು ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಚೆಕಪ್ ಮಾಡುವಂತೆ ಸಿಸಿಬಿ ಪೊಲೀಸರು ವಿಕ್ಟೋರಿಯಾ ಅಸ್ಪತ್ರೆಯ ವೈದ್ಯರಿಗೆ ಮನವಿ ಮಾಡಿದ್ದಾರೆ.
ನಿನ್ನೆ ಬಟ್ಟೆ ತೊಳೆಯಲೆಂದು ಚೈತ್ರಾ ಕುಂದಾಪುರ ಪೊಲೀಸರ ಬಳಿ ಸೋಪು ಕೇಳಿದ್ದರು ಎನ್ನಲಾಗಿದೆ. ಎಸಿಪಿ ರೀನಾ ಸುವರ್ಣ ಬಟ್ಟೆ ಸೋಪು ತರಿಸಿಕೊಟ್ಟಿದ್ದು,ಇಂದು ಸಿಸಿಬಿ ಕಚೇರಿಯಲ್ಲಿ ಚೈತ್ರಾ ಪ್ರಜ್ಞೆ ತಪ್ಪಿ ಬಿದ್ದಾಗ ಬಾಯಲ್ಲಿ ನೊರೆ ಕಾಣಿಸಿಕೊಂಡಿತ್ತು. ಪಿಡ್ಸ್ ಅಂತ ಬಂದ್ರೂ ಈ ವರೆಗಿನ ಪರೀಕ್ಷೆಯಲ್ಲಿ ಯಾವುದೇ ಪಿಡ್ಸ್ ಅಂಶ ಕಂಡುಬಂದಿಲ್ಲ ಅಂತ ವಿಕ್ಟೋರಿಯಾ ಆಸ್ಪತ್ರೆಯ ನೋಡಲ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.