ನ್ಯೂಸ್ ನಾಟೌಟ್: ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತೀಯ ಬೌಲರ್ಗಳು ಅಬ್ಬರಿಸಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆತಿಥೇಯ ಶ್ರೀಲಂಕಾ ತಂಡವನ್ನು ಕೇವಲ 50 ರನ್ಗಳಿಗೆ ಆಲೌಟ್ ಮಾಡಿದೆ. ಏಕದಿನ ಮಾದರಿಯಲ್ಲಿ ಭಾರತ ವಿರುದ್ಧ ಶ್ರೀಲಂಕಾ ತಂಡ ಬಾರಿಸಿದ ಅತ್ಯಂತ ಕನಿಷ್ಠ ಮೊತ್ತ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.
ಭಾರತ ತಂಡದ ಪರವಾಗಿ ಮೊಹಮ್ಮದ್ ಸಿರಾಜ್ ಜೀವನ ಶ್ರೇಷ್ಠ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಶ್ರೀಲಂಕಾದ ಬ್ಯಾಟ್ಸ್ ಮನ್ಗಳೆಲ್ಲರೂ ತರಗೆಲೆಯಂತೆ ಉದುರಿದರು. ಸಿರಾಜ್ ತಮ್ಮ 7 ಓವರ್ಗಳ ಸ್ಪೆಲ್ನಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ.
ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ 2.2 ಓವರ್ಗಳ 3 ರನ್ ಬಾರಿಸಿ 3 ವಿಕೆಟ್ ಪಡೆದರು.