ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಸಂಭ್ರಮದಿಂದ ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸುಳ್ಯದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಾದ KVG ಮೆಡಿಕಲ್ ಕಾಲೇಜು-ಆಸ್ಪತ್ರೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ವಿಘ್ನ ನಿವಾರಕ ಮಹಾಗಣಪತಿಯನ್ನು ಇದೇ ಮೊದಲ ಬಾರಿಗೆ ಕೆವಿಜಿ ಕ್ಯಾಂಪಸ್ ನಲ್ಲಿ ಪ್ರತಿಷ್ಟಾಪನೆ ಮಾಡಲಾಗಿದೆ. ಈ ಹಿಂದೆ ಕೆವಿಜಿ ಆಸ್ಪತ್ರೆಯ ಮುಂಭಾಗದಲ್ಲಿರುವ ಗಣೇಶ ಮೂರ್ತಿ ಎದುರೇ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತಿತ್ತು. ಆದರೆ ಈ ಸಲ ವಿದ್ಯಾರ್ಥಿಗಳ ವಿಶೇಷ ಮುತುವರ್ಜಿ, ಆಡಳಿತ ಮಂಡಳಿಯ ಸಹಕಾರದೊಂದಿಗೆ ಗಣೇಶನ ಪ್ರತಿಷ್ಟಾಪನೆ ಮಾಡಲಾಗಿದೆ. ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಕೆವಿಜಿ ವಿದ್ಯಾ ಸಂಸ್ಥೆಗಳಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಈ ಗಣಪತಿಯನ್ನು ವಿದ್ಯಾ ಗಣಪತಿಯೆಂದೇ ಕರೆಯಲಾಗಿದೆ. ಹೂವುಗಳಿಂದ ಅಲಂಕೃತಗೊಂಡಿದ್ದ ಗಣಪನನ್ನು ಕೆವಿಜಿ ದ್ವಾರದ ಬಳಿ ಪೂಜೆ ಮಾಡಿ ಶಿಂಗಾರಿ ಮೇಳದ ಚೆಂಡೆ ಸದ್ದಿನೊಂದಿಗೆ ಮಹಿಳೆಯರ ಪೂರ್ಣ ಕುಂಭ ಸ್ವಾಗತದೊಂದಿಗೆ ಮಂಟಪಕ್ಕೆ ತಂದು ಅಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಆಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾರ್ಯದರ್ಶಿಗಳಾದ ಡಾ. ಐಶ್ವರ್ಯ ಕೆ.ಸಿ, ಕೆ.ವಿ. ಹೇಮನಾಥ, ಕೌನ್ಸಿಲ್ ಮೆಂಬರ್ ಮೀನಾಕ್ಷಿ ಹೇಮನಾಥ್, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ, ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಪದವಿ ವಿದ್ಯಾರ್ಥಿಗಳು, ಕಲಿಕಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.