ನ್ಯೂಸ್ ನಾಟೌಟ್ : ಮ್ಯೂಲ್ ಅಕೌಂಟ್ಗಳ ವಿರುದ್ಧದ ಕಾರ್ಯಾಚರಣೆ ವೇಳೆ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ರನ್ನ ಬಂಧಿಸಲಾಗಿದೆ.
ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 4 ಮೊಬೈಲ್ ಫೋನ್ಗಳು, 18 ಬಿಟ್ ಕಾರ್ಡ್ಗಳು, 17 ಬ್ಯಾಂಕ್ ಪಾಸ್ಬುಕ್ಗಳು, 6 ಚೆಕ್ ಪುಸ್ತಕಗಳು, 1,479.31 USDT (ಕ್ರಿಪ್ಟೋಕರೆನ್ಸಿ) 1 ಕಾರನ್ನು ವಶಕ್ಕೆ ಪಡೆಯಲಾಗಿದೆ.













