ನ್ಯೂಸ್ ನಾಟೌಟ್: 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಮಧ್ಯಮವೇಗಿ ಟೈಟಸ್ ಸಾಧು ಅವರ ಅಮೋಘ ಬೌಲಿಂಗ್ ಬಲದಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು ಚಿನ್ನದ ಪದಕ ಗೆದ್ದುಕೊಂಡಿದೆ.
ಸೋಮವಾರ ನಡೆದ ಫೈನಲ್ ಪಂದ್ಯದಲ್ಲಿ ಟೈಟಸ್ (6ಕ್ಕೆ3) ದಾಳಿಯ ಬಲದಿಂದ ಭಾರತ ತಂಡವು ಶ್ರೀಲಂಕಾ ಎದುರು 19 ರನ್ಗಳಿಂದ ಜಯಿಸಿತು. ಜೂಲನ್ ಗೋಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಟೈಟಸ್ ಅತ್ಯುತ್ತಮ ಪ್ರದರ್ಶನ ನೀಡಿರುವುದು ವಿಶೇಷ.
ಟಾಸ್ ಗೆದ್ದ ಭಾರತ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಎರಡು ಪಂದ್ಯಗಳ ಅಮಾನತು ಶಿಕ್ಷೆ ಪೂರೈಸಿ ಮರಳಿದ ಹರ್ಮನ್ಪ್ರೀತ್ ಕೌರ್ ಈ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದರು. ಆರಂಭಿಕ ಬ್ಯಾಟರ್ ಸ್ಮೃತಿ ಮಂದಾನ (46 ರನ್) ಮತ್ತು ಜೆಮಿಮಾ ರಾಡ್ರಿಗಸ್ (42 ರನ್) ಅವರ ಉತ್ತಮ ಬ್ಯಾಟಿಂಗ್ ಬಲದಿಂದ 20 ಓವರ್ಗಳಲ್ಲಿ 7 ವಿಕೆಟ್ಗಳಿಗೆ 116 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 97 ರನ್ ಗಳಿಸಿ ಸೋತಿತು. ಮಧ್ಯಮ ಕ್ರಮಾಂಕದ ಬ್ಯಾಟ್ಸ್ ವುಮನ್ ಹಾಸಿನಿ ಪೆರೆರಾ (25; 22ಎ) ಮತ್ತು ನಿಕಾಶಿ ಡಿಸಿಲ್ವಾ (23; 34ಎ) ಅವರ ಹೋರಾಟ ಫಲ ನೀಡಲಿಲ್ಲ.
ಸಂಕ್ಷಿಪ್ತ ಸ್ಕೋರು
ಭಾರತ: 20 ಓವರ್ಗಳಲ್ಲಿ 7 ವಿಕೆಟ್ಗಳಿಗೆ 116 (ಹರ್ಮನ್ಪ್ರೀತ್ ಕೌರ್ 46, ಜೆಮಿಮಾ ರಾಡ್ರಿಗಸ್ 42) ಶ್ರೀಲಂಕಾ: 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 97 (ಹಸಿನಿ ಪೆರೆರಾ 25, ಟೈಟಸ್ ಸಾಧು 6ಕ್ಕೆ3) ಫಲಿತಾಂಶ: ಭಾರತ ತಂಡಕ್ಕೆ 19 ರನ್ಗಳ ಜಯ ಮತ್ತು ಚಿನ್ನದ ಪದಕ.