ನ್ಯೂಸ್ ನಾಟೌಟ್: ಕಡಬದ ಮರ್ಧಾಳದಲ್ಲಿ ಸೆ. 25ರಂದು ತಡರಾತ್ರಿ ಮಸೀದಿ ಕಾಂಪೌಂಡ್ ನೊಳಗೆ ಬೈಕ್ ನುಗ್ಗಿಸಿ ಜೈಶ್ರೀ ರಾಮ್ ಘೋಷಣೆ ಕೂಗಿರುವ ಆರೋಪಿಗಳ ಪೈಕಿ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ದಾರಿ ಮಾಡಿಕೊಡುವ ರೀತಿಯ ವರ್ತನೆಯ ವಿರುದ್ಧ ಪೊಲೀಸರು ಬಿಗಿ ಕ್ರಮ ತೆಗೆದುಕೊಂಡಿದ್ದಾರೆ. ಗಂಟನೆ ನಡೆದು ಕೇವಲ 24 ಗಂಟೆಗಳ ಒಳಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸೆ. 25 ರಂದು ರಾತ್ರಿ ವೇಳೆಗೆ ಬೈಕ್ ನಲ್ಲಿ ಬಂದ ಅಪರಿಚಿತರು ಕಾಂಪೌಂಡ್ ಒಳಗೆ ಬೈಕ್ ಸಹಿತ ನುಗ್ಗಿದ್ದರು. ಮಾತ್ರವಲ್ಲ ಜೈ ಶ್ರೀರಾಮ್ ಘೋಷಣೆ ಕೂಗಿದರು. ಈ ಆರೋಪಿಗಳ ಬೈಕ್ ಈಗ ಓರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೀರ್ತನ್ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಸಚಿನ್ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಗಳು ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಆಗಮಿಸಿ ಮಸೀದಿಯ ವರಾಂಡದಲ್ಲಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗಿದೆ. ಆಗ ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಹೊರಗೆ ಬಂದಿದ್ದಾರೆ. ಏನಾಗಿದೆ ಅನ್ನುವುದನ್ನು ಪರೀಕ್ಷಿಸುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಬೈಕಿನಲ್ಲಿ ಕಾಂಪೌಂಡ್ ಒಳಗಡೆ ಬಂದು ತೆರಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ವಿಷಯ ತಿಳಿದು ತಕ್ಷಣವೇ ಸ್ಥಳಕ್ಕಾಗಮಿಸಿದ ಕಡಬ ಠಾಣಾ ಸಬ್ ಇನ್ಸ್ ಪೆಕ್ಟರ್ ಅಭಿನಂದನ್, ಉಪ್ಪಿನಂಗಡಿ ಠಾಣಾ ಸಬ್ ಇನ್ಸ್ ಪೆಕ್ಟರ್ ರಾಜೇಶ್ ಹಾಗೂ ಸಿಬ್ಬಂದಿ ಹತ್ತಿರ ಸಿಸಿ ಕ್ಯಾಮೆರಾವನ್ನು ಪರೀಕ್ಷಿಸಿದ್ದಾರೆ. ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿತ್ತು. ಅದರಂತೆ ಸೋಮವಾರ ಸಂಜೆ ವೇಳೆಗೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೊಬ್ಬನಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದ್ದು ಶೀಘ್ರದಲ್ಲಿಯೇ ಆತನನ್ನೂ ಬಂಧಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.