ನ್ಯೂಸ್ ನಾಟೌಟ್ : ಗರ್ಭಿಣಿ ಮಗಳನ್ನು ಕಾಡಿಗೆ ಕರೆದೊಯ್ದು ಹೆತ್ತ ಮಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ವರದಿಯಾಗಿದೆ.ಉತ್ತರ ಪ್ರದೇಶದ ಹಾಪುರದಲ್ಲಿ ಈ ಘಟನೆ ನಡೆದಿದ್ದು, ಅವಿವಾಹಿತ ಮಗಳು ಗರ್ಭಿಣಿಯಾಗಿರುವ ವಿಷಯ ತಿಳಿದ ಮಹಿಳೆಯ ಮನೆಯವರು ಆಕ್ರೋಶಗೊಂಡು ಈ ಕೃತ್ಯವೆಸಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನ್ನ ಮಗಳು ಮದುವೆಯಾಗದೇ ಗರ್ಭಿಣಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದ ತಾಯಿ ವಿಪರೀತ ಕೋಪಗೊಂಡು ಈ ಘಟನೆ ನಡೆದಿದೆ ಎನ್ನಲಾಗಿದೆ. ಮಗಳ ಜತೆ ಮಗುವಿನ ತಂದೆಯ ಬಗ್ಗೆ ಕೇಳಲಾಯಿತು.ಆದರೆ ಆಕೆ ಅವರಿಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲಿಲ್ಲ. ನಂತರ 21 ವರ್ಷದ ಯುವತಿಯ ತಾಯಿ ಮತ್ತು ಸಹೋದರ ಆಕೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ಈ ವೇಳೆ ಕಾಡಿಗೆಂದು ಹೋಗಿದ್ದ ಕೆಲವು ರೈತರು ಯುವತಿಯ ಆರ್ಭಟವನ್ನು ಗಮನಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲಿನ ವೈದ್ಯರು ಆಕೆಯನ್ನು ಮೀರತ್ನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಆಕೆಯ ತಾಯಿ ಮತ್ತು ಸಹೋದರನನ್ನು ಬಂಧಿಸಲಾಗಿದೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಮೀರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.