ನ್ಯೂಸ್ ನಾಟೌಟ್ : ವ್ಯಕ್ತಿಯೋರ್ವ ಕೆರೆಗೆ ಹಾರಿ ಜೀವನವನ್ನೇ ಕತ್ತಲನ್ನಾಗಿ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ನಡೆದಿದೆ.ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಕೆರೆಗೆ ಹಾರಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಸೋಮವಾರ ಮುಂಜಾನೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿದ್ದಾರೆಂದು ಸಂಶಯಪಟ್ಟರು. ಕೂಡಲೇ ಅವರು ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿದರು.ಉಸಿರು ಚೆಲ್ಲಿದ್ದ ನಾರಾಯಣ ಕುಲಾಲ್ ಅವರ ದೇಹವನ್ನು ಹೊರಗೆ ತೆಗೆದಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.