Newsnotout
Featuredಕ್ರೈಂರಾಜ್ಯ

ಪ್ರ್ಯಾಂಕ್‌ ಮಾಡೋದಕ್ಕೆ ಜೀವಂತ ವ್ಯಕ್ತಿಯ ಪಾರ್ಸೆಲ್ ; ಅಯ್ಯೊಯ್ಯೋ, ಇದು ಕಥೆಯಲ್ಲ,ನೈಜ ಘಟನೆ!

ನ್ಯೂಸ್ ನಾಟೌಟ್ : ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ, ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸೆಲ್ ಮಾಡಲು ಬಂದಿರುವ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮಾ.17 ಸಂಜೆ 4:30ರ ಸುಮಾರಿಗೆ ಬಿಳಿಬಣ್ಣದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದಿದ್ದರು. ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ ಹೇಳಿದ್ದಾರೆ. ಮೂಟೆ ಅಲುಗಾಡ್ತಿರೋದು ನೋಡಿ ಕೊರಿಯರ್ ಕಚೇರಿಯಲ್ಲಿದ್ದ ಇಬ್ಬರು ಮಹಿಳಾ ಸಿಬ್ಬಂದಿ ಗಾಬರಿಯಾಗಿದ್ದಾರೆ. ಮೂಟೆಯನ್ನ ಓಪನ್ ಮಾಡಿದಾಗ ವೃದ್ದನೊಬ್ಬ ಮೂಟೆಯಿಂದ ಎದ್ದು ಹೊರನಡೆದಿದ್ದಾನೆ.

ವೃದ್ಧ ಹೊರನಡೆಯುತ್ತಿದ್ದಂತೆ ಕೊರಿಯರ್ ಪಾರ್ಸೆಲ್ ಮಾಡಲು ಬಂದಿದ್ದ ಇಬ್ಬರು ಮಹಿಳೆಯರು, ಪುರುಷರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಮೂಟೆಯಲ್ಲಿದ್ದ ವ್ಯಕ್ತಿಗೆ ಮಾತನಾಡಲು ಕೂಡ ಬರುತ್ತಿರಲಿಲ್ಲ. ಈ ಬಗ್ಗೆ ಕೊರಿಯರ್ ಆಫೀಸ್‌ನ ಸಿಬ್ಬಂದಿ ಭಯಪಟ್ಟಿದ್ದು, ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಐವರನ್ನು ಕರೆಸಿ ವಿಚಾರಣೆ ನಡೆಸಿದಾಗ ಒಂದೇ ಕುಟುಂಬದವರು ಸೇರಿಕೊಂಡು ಪ್ರ್ಯಾಂಕ್‌ ಮಾಡಿರುವುದು ಗೊತ್ತಾಗಿದೆ. ಯುಗಾದಿ ಮತ್ತು ರಂಜನ್ ಹಬ್ಬ ಒಟ್ಟಿಗೆ ಬಂದಿದೆ. ಹೀಗಾಗಿ ಬಸ್‌ನಲ್ಲಿ ಸೀಟ್ ಸಿಗಲ್ಲ ಅನ್ನೋ ಕಾರಣಕ್ಕೆ ವ್ಯಕ್ತಿಯನ್ನು ಪಾರ್ಸೆಲ್ ಮಾಡುವ ವಿಷಯ ಇಟ್ಟುಕೊಂಡು ವಿಡಿಯೋ ಮಾಡಲು ಈ ರೀತಿ ಮಾಡಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. ಅದಕ್ಕೆ ಪೊಲೀಸರು ಈ ರೀತಿ ಒಬ್ಬ ವ್ಯಕ್ತಿಯನ್ನ ಚೀಲದಲ್ಲಿ ತರೋದು ತಪ್ಪು ಅನ್ನೋದು ಗೊತ್ತಿಲ್ವಾ? ನಿಮ್ಮ ಹುಡುಗಾಟಕ್ಕೆ ಚೀಲದಲ್ಲಿದ್ದ ವ್ಯಕ್ತಿ ಉಸಿರುಗಟ್ಟಿ ಸತ್ತಿದ್ರೆ, ಇಲ್ಲ ಆರೋಗ್ಯ ಸಮಸ್ಯೆ ಆಗಿದ್ರೇ ಯಾರು ಹೊಣೆ? ಒಂದು ವೇಳೆ ಕೊರಿಯರ್ ಕಚೇರಿಯ ಸಿಬ್ಬಂದಿಗೆ ಏನಾದರೂ ಆಗಿದ್ರೇ ಯಾರು ಹೊಣೆ? ರೀಲ್ಸ್‌ಗಾಗಿ ಈ ರೀತಿ ಹುಡುಕಾಟ ಮಾಡೋದು ಸರಿನಾ? ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.

ಫ್ಯಾಮಿಲಿ `ಮಾಂಕ್ ಪ್ರಾಂಕ್’ ಎಂಬ ಅಕೌಂಟ್‌ನ್ನು ಹೊಂದಿದ್ದು, ಗಂಡ, ಹೆಂಡತಿ, ಅತ್ತೆ, ಮಾವ ಮತ್ತು ಮೈದುನ ಸೇರಿಕೊಂಡು ರೀಲ್ಸ್, ಪ್ರ್ಯಾಂಕ್‌ ಮಾಡುತ್ತಿರುತ್ತಾರೆ. ಈ ಬಗ್ಗೆ ಕುಟುಂಬಸ್ಥರು ಮಾತನಾಡಿದ್ದು, ನಾವು ಬಸ್ ರಶ್ ವಿಚಾರದಲ್ಲಿ ಪ್ರ್ಯಾಂಕ್‌ ಮಾಡಲು ಹೋಗಿದ್ವಿ, ಅದು ಈ ರೀತಿ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನಾವು ತಪ್ಪು ಮಾಡಿದ್ದೇವೆ, ಅದರಿಂದ ಹೀಗೆ ಕಷ್ಟ ಆಗುತ್ತೆ ಅಂತಾ ಗೊತ್ತಿರಲಿಲ್ಲ. ಪೊಲೀಸರು ಕರೆಸಿ ಬುದ್ಧಿ ಹೇಳಿದ್ರು, ಇನ್ಮುಂದೆ ಈ ರೀತಿ ನಾವು ಮಾಡಲ್ಲ. ಯಾರು ರೀತಿ ನೀವು ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.

Related posts

ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Team Newsnotout

ಮಾಜಿ ಪತ್ನಿ ಸಮಂತಾ ಮದುವೆ ಬೆನ್ನಲ್ಲೆ ಭಾವುಕ ಪೋಸ್ಟ್‌ ಹಂಚಿಕೊಂಡ ನಾಗಚೈತನ್ಯ! ವೈರಲ್ ಪೋಸ್ಟ್ ನಲ್ಲೇನಿದೆ?

Team Newsnotout

ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

Team Newsnotout

Leave a Comment