ಸುಬ್ರಹ್ಮಣ್ಯ : ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಪ್ರಯುಕ್ತ ಭಕ್ತಿ ಸಡಗರದಿಂದ ಬ್ರಹ್ಮ ರಥೋತ್ಸವ ಕಾರ್ಯಕ್ರಮ ನೆರವೇರಿತು. ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯಂದು ಗುರುವಾರ ಬೆಳಗ್ಗೆ 6.58ರ ವೃಶ್ಚಿಕ ಲಗ್ನ ಸುಮೂಹುರ್ತದಲ್ಲಿ ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾಗಿ, ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದ ನಂತರ ಸುವರ್ಣ ರಥೋತ್ಸವ ನಡೆಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಪಿಜಿಎಸ್ಎನ್ ಪ್ರಸಾದ್, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಶೋಭಾ ಗಿರಿಧರ್, ಲೋಕೇಶ್ ಮುಂಡುಕಜೆ, ಎಇಒ ಪುಷ್ಪಲತಾ ರಾವ್ ಸೇರಿದಂತೆ ದೇವಳದ ಸಿಬ್ಬಂಧಿಗಳು, ಭಕ್ತರು ಉಪಸ್ಥಿತರಿದ್ದರು.