ನ್ಯೂಸ್ ನಾಟೌಟ್: ಖಾಸಗಿ ಶಾಲೆಯ ಆವರಣದಲ್ಲಿ ಗುರುವಾರ ಮಧ್ಯಾಹ್ನ ಹೀಲಿಯಂ ಸಿಲಿಂಡರ್ ಮತ್ತು ಗ್ಯಾಸ್ ತುಂಬಿದ ಬಲೂನ್ ಸ್ಫೋಟಗೊಂಡ ಪರಿಣಾಮ 33 ಶಾಲಾ ವಿದ್ಯಾರ್ಥಿಗಳು ಸೇರಿದಂತೆ 37 ಜನರು ಗಾಯಗೊಂಡ ಘಟನೆ ಛತ್ತೀಸ್ಗಢದ ಸುರ್ಗುಜಾ ಜಿಲ್ಲೆಯಲ್ಲಿ ನಡೆದಿದೆ.
ಅಂಬಿಕಾಪುರ ನಗರದ ವಿವೇಕಾನಂದ ಶಾಲೆಯ ಮೈದಾನದಲ್ಲಿ ಮಧ್ಯಾಹ್ನ ಹೀಲಿಯಂ ಸಿಲಿಂಡರ್ ಅನ್ನು ಬಲೂನ್ಗಳನ್ನು ತುಂಬಲು ಬಳಸುತ್ತಿದ್ದಾಗ ಸಿಲಿಂಡರ್ ಮತ್ತು ಗ್ಯಾಸ್ ತುಂಬಿದ ಬಲೂನ್ ಸ್ಫೋಟಗೊಂಡ ಘಟನೆ ನಡೆದಿದೆ.
ಬಲೂನಿಗೆ ಹೀಲಿಯಂ ತುಂಬುತ್ತಿದ್ದಾಗ ಸಿಲಿಂಡರ್ ಸಿಡಿದು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗ್ಯಾಸ್ ತುಂಬಿದ ಬಲೂನ್ ಮತ್ತು ಸಿಲಿಂಡರ್ ಸ್ಫೋಟದಿಂದ ಉಂಟಾದ ಅಪಘಾತದಲ್ಲಿ 33 ಶಾಲಾ ವಿದ್ಯಾರ್ಥಿಗಳು ಸೇರಿದಂತೆ 37 ಜನರು ಗಾಯಗೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಬಲೂನ್ಗಳನ್ನು ಅಲಂಕಾರಕ್ಕೆ ಬಳಸಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಶಾಲೆಯ ಆವರಣದಲ್ಲಿ ಗ್ಯಾಸ್ ತುಂಬಿಸಿರುವುದು ಏಕೆ ಎಂದು ಪೊಲೀಸರು ತನಿಖೆ ನಡೆಸಲಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಗಾಯಗೊಂಡ 33 ಮಕ್ಕಳಲ್ಲಿ 11 ಮಂದಿಯನ್ನು ಪ್ರಥಮ ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನು ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.