ನ್ಯೂಸ್ ನಾಟೌಟ್: ಇಸ್ರೇಲ್ ಗೆ ದಾಳಿ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಮಂಗಳೂರಿನ ವ್ಯಕ್ತಿಯ ವಿಡಿಯೋ ಶನಿವಾರ ಎಲ್ಲೆಡೆ ವೈರಲ್ ಆಗಿದೆ.
ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳೆಂದು ಕರೆದ ಮಂಗಳೂರಿನ ಝಾಕಿರ್ ಹಮಾಸ್, ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ. ಎನ್ನಲಾಗಿದೆ.ಪ್ಯಾಲಿಸ್ಟೈನ್ , ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿರುವ ಝಾಕಿರ್ ಹಮಾಸ್ ಉಗ್ರರನ್ನು ದೇಶ ಪ್ರೇಮಿ ಯೋಧರೆಂದು ಬಣ್ಣಿಸಿದ್ದಾನೆ.
ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದು, ಈತ ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುತ್ತಿದ್ದ ಎನ್ನಲಾಗಿದೆ.
ಝಾಕಿರ್ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂ ಸಂಘಟನೆಗಳಿಂದಲೂ ಭಾರೀ ವಿರೋಧ ಉಂಟಾಗಿದೆ.ಝಾಕಿರ್ ನನ್ನು ಈ ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಗಳ ಒತ್ತಾಯ ಹೆಚ್ಚಾಗಿದ್ದು, ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.