ನ್ಯೂಸ್ ನಾಟೌಟ್ : ಕೊಕ್ಕಡದ ಸಮೀಪವಿರುವ ಇತಿಹಾಸ ಪ್ರಸಿದ್ಧ ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಇಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ, ಕೊಕ್ಕಡ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ನಿತಿನ್ ಪೂಜಾರಿ, ಕೊಕ್ಕಡ ಕೃಷಿ ಪತ್ತಿನ ಸದಸ್ಯರಾದ ವಿಶ್ವನಾಥ ಕೊಲ್ಲಾಜೆ, ಕೃಷಿ ಪತ್ತಿನ ಮಾಜಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಸುದಾ ನಾಗೇಶ್ ಯಶೋಧರ ಚಾರ್ಮಾಡಿ, ಕೆಂ ಎಂ ನಾಗೇಶ್ ಕುಮಾರ್ ಗೌಡ, ಅಭಿಮಾನಿ ಬಳಗದ ಸದಸ್ಯರಾದ ಉಮೇಶ್ ಬಂಗೇರ, ಗಣೇಶ್ ಕಾಶಿ, ದಯನಿಷ್ ಗೌಡ ,ಹರಿಶ್ಚಂದ್ರ ,ಅಶ್ವಿನ್ ಕಿರಣ್, ಅಚ್ಚುತ್ತ ನಾಯ್ಕ, ಗಣೇಶ್ ಪಿಜಿನಡ್ಕ ಉಪಸ್ಥಿತರಿದ್ದರು.
ರಾಜ್ಯದ ಕೃಷಿ ಸಚಿವ ಚೆಲುವರಾಯ ಸ್ವಾಮಿ ದಂಪತಿ ಇಂದು (ಅ.15 ರಂದು) ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥಿಸಿಕೊಂಡರು.ಈ ಸಂದರ್ಭದಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಹಾಗೂ ಸಿಬ್ಬಂದಿ ವರ್ಗ ಅವರನ್ನು ಪ್ರೀತಿಯಿಂದ ಸ್ವಾಗತಿಸಿದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ” ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರನ್ನು ಕಾಡುತ್ತಿರುವ ಅತೀ ದೊಡ್ಡ ಸಮಸ್ಯೆಯೆಂದರೆ ಅಡಿಕೆ ಕೃಷಿಗೆ ಎದುರಾಗಿರುವ ಎಲೆ ಚುಕ್ಕಿ ರೋಗ.ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂಬ ಉದ್ದೇಶದಿಂದ ಈ ಬಾರಿಯ ಬಜೆಟ್ ನಲ್ಲಿ ಪರಿಹಾರ ಧನ ಮೀಸಲಿಡುವ ಬಗ್ಗೆ ಗಮನ ಹರಿಸುತ್ತಿದ್ದೇವೆ ಎಂದು ಹೇಳಿದರು. ಅಲ್ಲದೆ ಅಡಿಕೆಗೆ ಬಾಧಿಸಿರುವ ರೋಗಕ್ಕೆ ಶೀಘ್ರದಲ್ಲಿಯೇ ಶಿವಮೊಗ್ಗದ ಕೃಷಿ ತಜ್ಞರಿಂದ 10 ದಿವಸಗಳಲ್ಲಿ ಮಾಹಿತಿ ಪಡೆಯುವುದಾಗಿ ತಿಳಿಸಿದರು.
ಈ ವೇಳೆ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ, ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಮನೋಜ್ ನಾಗರಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.