ನ್ಯೂಸ್ ನಾಟೌಟ್ : ಹೊಳೆಗೆ ಈಜಲೆಂದು ಹೋಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಪುತ್ತೂರು ತಾಲೂಕಿನ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ನಡೆದಿದೆ.ತಸ್ಲೀಮ್ (17ವ) ಮೃತ ಯುವಕನೆಂದು ತಿಳಿದು ಬಂದಿದೆ.ಈತ ಸುಳ್ಯ ತಾಲೂಕಿನ ಅರಂತೋಡು ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೆಂದು ಹೇಳಲಾಗಿದೆ.
ನಾಪತ್ತೆಯಾಗಿದ್ದ ಯುವಕನ ಮೃತದೇಹ ಅ.16ರಂದು ಬೆಳಿಗ್ಗೆ ಪತ್ತೆಯಾಗಿದೆ.ತಸ್ಲೀಮ್ (17ವ) ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ಎಂದು ತಿಳಿದು ಬಂದಿದೆ.ಅ.15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ಹೊಳೆಗೆ ಈಜಲು ತೆರಳಿದ್ದ.ಈ ವೇಳೆ ದುರ್ಘಟನೆ ಸಂಭವಿಸಿತ್ತು. ಯುವಕ ನಾಪತ್ತೆಯಾಗುತ್ತಿದ್ದಂತೆ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.
ತಕ್ಷಣ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ನಡೆಸಿದರಾದರೂ ಯುವಕ ಪತ್ತೆಯಾಗಿರಲಿಲ್ಲ. ಬಳಿಕ ಮುಳುಗು ತಜ್ಞರು ಕಾರ್ಯಾಚರಣೆ ಮುಂದುವರಿಸಿದ್ದರು. ಅದರೂ, ಆತ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಆಸುಪಾಸಿನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.