ನ್ಯೂಸ್ ನಾಟೌಟ್: ಸುಬ್ರಹ್ಮಣ್ಯದ ಅಪ್ರಾಪ್ತ ಬಾಲಕಿಯೋರ್ವಳನ್ನು ಮಡಿಕೇರಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಕುಕ್ಕೆ ಸುಬ್ರಹ್ಮಣ್ಯದ ವಸತಿ ಗೃಹವೊಂದರ ಉದ್ಯೋಗಿ ಆದರ್ಶ ಎಂದು ತಿಳಿದುಬಂದಿದೆ. ಬಾಲಕಿ ಕಾಣೆಯಾದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.