ನ್ಯೂಸ್ನಾಟೌಟ್: ಮಂಗಳೂರಿನ ಎನ್ಎಂಪಿಟಿ ಮುಖ್ಯದ್ವಾರದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಪಿಎಸ್ಸೈ ಒಬ್ಬರು ತನ್ನದೇ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ.
ಮೃತ ಪಿಎಸ್ಸೈ ರಾಯಚೂರು ಮೂಲದ ಝಾಕೀರ್ ಹುಸೈನ್(58) ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐ ಪಿಎಸ್ಸೈ ಇಂದು ಬೆಳಿಗ್ಗೆ 6.30ಕ್ಕೆ ರಾತ್ರಿ ಪಾಳಿ ಕರ್ತವ್ಯ ಮುಗಿಸಿ ಶೌಚಾಲಯಕ್ಕೆ ಹೋಗಿದ್ದರು. ಈ ಸಂದರ್ಭ ತನ್ನದೇ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಕಾಏಕಿ ಈ ನಿರ್ಧಾರ ಯಾಕೆ ಕೈಗೊಂಡಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.