ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ ನಡೆಯಿತು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಷೆಯನ್ನು ಉಳಿಸುವುದು ಮತ್ತು ಬೆಳೆಸುವುದರ ಕುರಿತು ಚಿಂಥನ – ಮಂಥನ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಉಪಾಧ್ಯಕ್ಷೆ ಶೋಭಾ ಚಿದಾನಂದ ಅವರು ಮಾತನಾಡಿ, “ಭಾಷೆಯನ್ನು ಬಳಸಿದಷ್ಟು ಉಳಿಯುತ್ತದೆ, ಬೆಳೆಯುತ್ತದೆ. ಇಂತಹ ಕಾರ್ಯಕ್ರಮಗಳ ಮೂಲಕ ಭಾಷೆಯ ಉಳಿವಿನೊಂದಿಗೆ ಸಂಸ್ಕೃತಿಯ ಉಳಿವು ಕೂಡ ಸಾಧ್ಯ” ಎಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ,’ಯುವಜನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ, ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಅರೆಭಾಷೆ ಅಕಾಡಮಿ ಸದಸ್ಯರಾದ ಚಂದ್ರಶೇಖರ ಪೇರಾಲು, ಚಂದ್ರಾವತಿ ಬಡ್ಡಡ್ಕ, ಡಾ.ಎನ್.ಎ. ಜ್ಞಾನೇಶ್, ಲೋಕೇಶ್ ಊರುಬೈಲು, ಗೋಪಾಲ ಪೆರಾಜೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಚಾಲಕಿ ಡಾ.ಮಮತಾ.ಕೆ, ಕನ್ನಡ ವಿಭಾಗದ ಮುಖ್ಯಸ್ಥೆ ಹಾಗೂ ಕಾರ್ಯಕ್ರಮದ ಸಂಯೋಜಕಿ ಡಾ.ಅನುರಾಧಾ ಕುರುಂಜಿ, ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಂಚಾಲಕ ಕುಲದೀಪ್ ಪೆಲ್ತಡ್ಕ, ಸಂಘದ ಅಧ್ಯಕ್ಷೆ ಹವ್ಯಶ್ರೀ ಕೆ.ಎಸ್, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಚಲನ ಟಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.



