ನ್ಯೂಸ್ನಾಟೌಟ್: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಮಾಡಲಾಗಿದೆ.
ಪ್ರಾಣಿಗಳನ್ನು ಹಿಂಸಿಸುವುದು ಮತ್ತು ಅವುಗಳ ಚರ್ಮ ಅಥವಾ ಉಗುರುಗಳನ್ನು ಬಳಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಘಟನೆಗೆ ಬಿಗ್ ಬಾಸ್ ಮನೆ ಸಾಕ್ಷಿಯಾಗಿದ್ದು, ‘ಕನ್ನಡ ಬಿಗ್ ಬಾಸ್’ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆ ಒಳಗೆ ಅರಣ್ಯಾಧಿಕಾರಿಗಳ ಎಂಟ್ರಿ ಆಗಿದೆ ಎನ್ನಲಾಗುತ್ತಿದೆ.
ವರ್ತೂರು ಸಂತೋಷ್ ರನ್ನು ಅರಣ್ಯಾಧಿಕಾರಿಗಳು ಭಾನುವಾರ (ಅಕ್ಟೋಬರ್ 22) ತಡರಾತ್ರಿ ಅರೆಸ್ಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಚರ್ಚೆ ಆಗುತ್ತಿದೆ. ಕೆಲವು ಮೂಲಗಳು ಇದನ್ನು ಖಚಿತಪಡಿಸಿವೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ.
ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು. ಇದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ.
ವರ್ತೂರು ಸಂತೋಷ್ ಅವರು ಬಿಗ್ ಬಾಸ್ಗೆ ಬರುವ ಸಂದರ್ಭದಲ್ಲಿ ಕತ್ತಿನಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಚೈನ್ ಹಾಕಿದ್ದರು. ಈ ಪೆಂಡೆಂಟ್ ಚರ್ಚೆ ಹುಟ್ಟುಹಾಕಿತ್ತು. ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಅವರು ಬಂಧನಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.