ನ್ಯೂಸ್ ನಾಟೌಟ್ : ಎಮೆರ್ಜೆನ್ಸಿ ವಾರ್ಡ್ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ (BJP Former MP) ಪುತ್ರನೊಬ್ಬ ಕೊನೆಯುಸಿರೆಳೆದ ಘಟನೆ ಉತ್ತರಪ್ರದೇಶ ಲಕ್ನೋದ ಎಸ್ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ.
ಅಸುನೀಗಿದವ ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಭಾರತೀಯ ಜನತಾ ಪಕ್ಷದ (BJP) ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ (Bhairon Prasad Mishra) ಪುತ್ರ.
ಮೂತ್ರಪಿಂಡದ (Kidney) ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ 11 ಗಂಟೆಗೆ ಎಸ್ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಬೆಡ್ ಕೊರತೆಯಿಂದಾಗಿ ತುರ್ತು ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋದ ಸ್ವಲ್ಪ ಸಮಯದ ಬಳಿಕ ಮಗ ಕೊನೆಯುಸಿರೆಳೆದಿರುವುದಾಗಿ ಪ್ರಸಾದ್ ಮಿಶ್ರಾ ದೂರಿದ್ದಾರೆ. ಅಲ್ಲದೆ ತುರ್ತು ವಾರ್ಡ್ನ ಹೊರಗೆ ಪ್ರತಿಭಟನೆ ಮಾಡಿದರು.
ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ವೈದ್ಯನ ಬಗ್ಗೆ ದೂರು ನೀಡುತ್ತಿದ್ದರು. ಆ ವೈದ್ಯನಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.