ನ್ಯೂಸ್ ನಾಟೌಟ್ : ಸುಳ್ಯದ ಕಾಂತಮಂಗಲದ ಅವಿವಾಹಿತ ಯುವಕನೊಬ್ಬ ದಿಢೀರ್ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.
ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಗಂಧದ ಗುಡ್ಡೆ ನಿವಾಸಿ ರಾಜೇಶ್, ಅಕ್ಟೋಬರ್ 31ರಂದು ರಾತ್ರಿಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಎಲ್ಲ ಕಡೆ ಹುಡುಕಾಟ ನಡೆಸಲಾಗಿತ್ತು.
ಇನ್ನೇನು ಮನೆಯವರು ಪೊಲೀಸ್ ದೂರು ನೀಡುವುದಕ್ಕೆ ನಿರ್ಧರಿಸಿದ್ದಾರೆ ಎನ್ನುವಾಗ ಬುಧವಾರ ಯುವಕ ಸುಳ್ಯದ ಚೆನ್ನಕೇಶವ ದೇವಸ್ಥಾನದ ಸಮೀಪ ನಡೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಮನೆಯವರು ಬಂದು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.