ನ್ಯೂಸ್ ನಾಟೌಟ್ : ಪಡಿತರ ಚೀಟಿ ಹೊಂದಿರುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಮೂಲಕ ಪಡಿತರ ಚೀಟಿದಾರರು ತಮ್ಮ ದಾಖಲೆಯನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಆದರೆ ಕೊನೆಯ ದಿನಾಂಕ ಘೋಷಣೆ ಮಾಡಿಲ್ಲ.
ಬಿಪಿಎಲ್, ಎಪಿಎಲ್ ಪಡಿತರ ಕಾರ್ಡ್ ತಿದ್ದಪಡಿಗೆ ಅವಕಾಶ ನೀಡುವಂತೆ ಸಾರ್ವಜನಿಕರಿಂದ ಮನವಿ ಕೇಳಿ ಬಂದಿತ್ತು. ಈ ಮನವಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇದೀಗ ರೇಶನ್ ಕಾರ್ಡ್ ತಿದ್ದುಪಡಿಗೆ ಮತ್ತೊಮ್ಮೆಅವಕಾಶ ಕಲ್ಪಿಸಲಾಗಿದೆ.
ಇನ್ನು ಸರ್ವರ್ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆ ಈ ಬಾರಿ ಹಂತ-ಹಂತವಾಗಿ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ಎರಡು ಬಾರಿ ರೇಶನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದಾಗಲೂ ಸರ್ವರ್ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ಹಂತ ಹಂತವಾಗಿ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು.
ಕಮಿಷನ್ ಗೆ ಆಗ್ರಹಿಸಿ ನವೆಂಬರ್ 7ರ ವರೆಗೂ ಪಡಿತರ ವಿತರಿಸದಿರಲು ಪಡಿತರ ವಿತರಕರೂ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪಡಿತರ ಅಂಗಡಿ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದು ವರದಿ ತಿಳಿಸಿದೆ.