ನ್ಯೂಸ್ ನಾಟೌಟ್: ತುಳುನಾಡಿನ ಸಂಸ್ಕೃತಿಯನ್ನು ರಾಜ್ಯ, ದೇಶದೆಲ್ಲೆಡೆ ಪಸರಿಸುವ ಉದ್ದೇಶದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ. 25-26 ರಂದು ಆಯೋಜಿಸಿರುವ ಬೆಂಗಳೂರು ಕಂಬಳ ಕೂಟಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.
ಕಂಬಳ ಕೂಟದ ಕರೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೀಕ್ಷಣೆ ಮಾಡಿದರು.
ಶುಕ್ರವಾರ ಮಧ್ಯಾಹ್ನ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಕರೆ ನಿರ್ಮಾಣದ ಮಾಹಿತಿ ಪಡೆದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಜತೆ ಚರ್ಚೆ ನಡೆಸಿದರು. ಕಂಬಳ ವೀಕ್ಷಣೆಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ. ಅದಕ್ಕೆ ಪೂರಕವಾಗಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಸಚಿವರು ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾಜಿ ಕಾರ್ಪೋರೇಟರ್ ಉಮೇಶ್ ಶೆಟ್ಟಿ, ಪ್ರಮುಖರಾದ ಗುಣರಂಜನ್ ಶೆಟ್ಟಿ, ಮುರಳೀದರ್ ರೈ ಮಠಂತಬೆಟ್ಟು ಸೇರಿದಂತೆ ಕಂಬಳ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.