ನ್ಯೂಸ್ ನಾಟೌಟ್ : ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ದೇವಾಲಯದೊಳಗೆ ನುಗ್ಗಿ ದೇವರ ಮೂರ್ತಿಯೆದುರಲ್ಲೇ ಮೂತ್ರ ವಿಸರ್ಜಿಸಿರುವ ಘಟನೆ ವರದಿಯಾಗಿದೆ. ಸದ್ಯ ಇದಕ್ಕೆ ಸಂಬಂಧ ಪಟ್ಟ ವಿಡಿಯೋ ವೈರಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ದೇವಾಲಯಕ್ಕೆ ನುಗ್ಗಿ ಶಿವಲಿಂಗದ ಬಳಿಯಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ್ದಾನೆ.ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಸಲಾರ್ ಬ್ಲಾಕ್ ವ್ಯಾಪ್ತಿಯ ಕಂದರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ದೇವಾಲಯದೊಳಕ್ಕೆ ಏಕಾಏಕಿ ನುಗ್ಗಿದ ವ್ಯಕ್ತಿ ಮೂತ್ರ ವಿಸರ್ಜಿಸಿ ಹೊರ ನಡೆದಿದ್ದಾನೆ. ಕೃತ್ಯವೆಸಗಿದ ವ್ಯಕ್ತಿಯನ್ನು ಅರಾ ಶೇಖ್ ಎಂದು ಗುರುತಿಸಲಾಗಿದೆ. ಸದ್ಯ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎನ್ನಲಾಗಿದೆ.ಆರೋಪಿ ಅರಾ ಶೇಕ್ ಈ ಕೃತ್ಯ ನಡೆಸಿದ್ದರೂ ಕೂಡ ಇದನ್ನು ವಿರೋಧಿಸಿದ್ದ ಮತ್ತೊಬ್ಬ ವ್ಯಕ್ತಿಯೊಂದಿಗೆ ವಾದ ಮಾಡಿದ್ದಾನೆ.
ಮೂಲಗಳ ಪ್ರಕಾರ ಆ ವ್ಯಕ್ತಿ ಅಲ್ಲಿ ಘಟನೆಗೂ ಮುನ್ನ ಯಾರೊಂದಿಗೋ ವಾಗ್ವಾದಕ್ಕಿಳಿದಿದ್ದು, ಇದೇ ಸಿಟ್ಟಿನಲ್ಲಿ ಆತ ದೇವಾಲಯದ ಒಳಗೆ ಪ್ರವೇಶ ಮಾಡಿ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ಆತನನ್ನು ತಡೆಯುವ ಪ್ರಯತ್ನ ಮಾಡಿದ್ದರೂ ಆತ ಮಾತು ಕೇಳದೆ ಈ ಕೃತ್ಯವನ್ನುವೆಸಗಿದ್ದಾನೆ.
ಈ ಘಟನೆ ಯಾವಾಗ ನಡೆದಿದೆ ಎನ್ನುವುದರ ಬಗ್ಗೆ ಖಚಿತವಾದ ಮಾಹಿತಿಗಳಿಲ್ಲ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇದು ಇನ್ನೂ ದೃಢಪಟ್ಟಿಲ್ಲ.ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.