ನ್ಯೂಸ್ ನಾಟೌಟ್ : ಯುವಜನತೆ ಹೊಸ ಆಲೋಚನೆಗಳೊಂದಿಗೆ ಮುನ್ನಡೆಯಬೇಕು. ದೇಶದ ಯುವ ಸಂಪತ್ತು ಸಕಾರಾತ್ಮಕ ರೀತಿಯಲ್ಲಿ ವಿನಿಯೋಗವಾದರೆ ಮಾತ್ರ ಭಾರತ ಮುಂದೆ ಸದೃಢ ದೇಶವಾಗಬಹುದು. ಯುವಕರು ಉದಾಸೀನತೆ ಬಿಟ್ಟು, ಬರುವ ಅಡೆತಡೆಗಳನ್ನು ಮೆಟ್ಟಿ ನಿಂತಾಗ ಸಾಧನೆ ಮಾಡಲು ಸಾಧ್ಯ ಎಂದು ನೆಹರೂ ಮೆಮೊರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಮತ್ತು ಪ್ರಸ್ತುತ ಡಾ. ಕೆ ಶಿವರಾಮ ಕಾರಂತ ಸರಕಾರಿ ಪದವಿ ಕಾಲೇಜು ಪೆರುವಾಜೆಯ ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ಹೇಳಿದರು.
ಸುಳ್ಯದ ನೆಹರು ಮೆಮೊರಿಯಲ್ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜ, ದೇಶಕ್ಕಾಗಿ ಎದ್ದು ನಿಲ್ಲುವ ಮನಸ್ಥಿತಿ ಬೆಳೆಯಬೇಕು. ಸ್ವಾರ್ಥ ತೊರೆದು ಬದುಕಬೇಕು. ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸುವ ಸಾಮರ್ಥ್ಯ ಬರಬೇಕು ಎಂದರು.
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಟಿ ವಿಶ್ವನಾಥ್ ಮಾತನಾಡಿ, ಉತ್ತಮ ನಾಯಕನಾಗಲು ಹಣದ ಅಗತ್ಯವಿಲ್ಲ. ಗುಣ ಅವಶ್ಯ ಎಂದರು. ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿವೇತನ ವಿತರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಎಂ., ಕಾಲೇಜು ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಯೋಜಕಿ ಡಾ. ಮಮತಾ ಕೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ರತ್ನ ಸಿಂಚನ ಮತ್ತು ತಂಡದವರು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೋಸ್ಪಿನ್ ಬಾಬು ಸ್ವಾಗತಿಸಿ, ಉಪಾಧ್ಯಕ್ಷೆ ನಿರೀಕ್ಷಾ ಜೆ. ಅತಿಥಿಗಳನ್ನು ಪರಿಚಯಿಸಿ, ಕಾರ್ಯದರ್ಶಿ ಕೃಷ್ಣರಾಜ ಕೆ.ಎಸ್. ವಂದಿಸಿದರು. ಗಾನ ಬಿ.ಡಿ. ಮತ್ತು ಅನ್ವಯ ಕಾರ್ಯಕ್ರಮ ನಿರೂಪಿಸಿದರು. ಕಾಲೇಜು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಮತ್ತು ಎಲ್ಲಾ ತರಗತಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.