ನ್ಯೂಸ್ ನಾಟೌಟ್: ಸುಳ್ಯದಲ್ಲಿ ಪ್ರೊ ಕಬಡ್ಡಿ ಮಾದರಿ ಕೂಟಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲೀಕರ ಸಂಘ ಸುಳ್ಯ ಆಶ್ರಯದಲ್ಲಿ ಈ ಕೂಟ ನಡೆಯುತ್ತಿದೆ. ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಸ್ಪರ್ಧೆ ಕ್ರಮವಾಗಿ ನಡೆಯಲಿದೆ.
ನವೆಂಬರ್ 17ರಿಂದ 19ರ ತನಕ ಕೂಟ ನಡೆಯಲಿದೆ. ದೇಶದ ವಿವಿಧ ರಾಜ್ಯದ ತಂಡಗಳು ಕೂಟದಲ್ಲಿ ಭಾಗವಹಿಸುತ್ತಿರುವುದು ಪ್ರಮುಖ ಆಕರ್ಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ಪ್ರಭು ಮೈದಾನದಲ್ಲಿ ತಯಾರಿ ನಡೆಯುತ್ತಿದ್ದು ಸ್ವತಃ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಪೂರ್ವ ಸಿದ್ಧತಾ ಕಾರ್ಯ ವೀಕ್ಷಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಎನ್.ಮನ್ಮಥ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಅಧ್ಯಕ್ಷ ಸಂಶುದ್ದೀನ್ ಜಿ.ಪಿ. ಭಾರತ್ ಶಾಮಿಯಾನ, ಕಾರ್ಯದರ್ಶಿ ಗುರುದತ್ ನಾಯಕ್, ಉಪಾಧ್ಯಕ್ಷ ಶಾಫಿ ಪ್ರಗತಿ, ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಶಿವಪ್ರಕಾಶ್, ಖಜಾಂಜಿ ಜಿ.ಎ.ಮಹಮ್ಮದ್, ಹರೀಶ್ ಉಬರಡ್ಕ, ಸುನಿಲ್, ಮಧುಸೂಧನ ಉಬರಡ್ಕ ಮತ್ತಿತರರು ಉಪಸ್ಥಿತರಿದ್ದರು.