ನ್ಯೂಸ್ ನಾಟೌಟ್: ಕತ್ತುಕೊಯ್ದುಕೊಂಡ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ ನ ಜನರಲ್ ಮ್ಯಾನೇಜರ್ ದೇಹ ಗುರುವಾರ ಮಂಗಳೂರಿನಲ್ಲಿ ಪತ್ತೆಯಾಗಿದೆ.
ವಾದಿರಾಜ ಕೆ.ಎ(51) ಮೃತ ವ್ಯಕ್ತಿ, ಮಂಗಳೂರು ನಗರ ಹೊರವಲಯದ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಗಂಭೀರ ಗಾಯಗೊಂಡಿದ್ದ ವಾದಿರಾಜ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದಾರೆ.
ವಾದಿರಾಜ ಕಳೆದ ಒಂದು ವರ್ಷದಿಂದ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.
ಕರ್ನಾಟಕ ಬ್ಯಾಂಕ್ ನಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಮಂಗಳೂರಿನ ಕರ್ನಾಟಕ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.