21.6 C
Sullia
Sunday, March 8, 2026

ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಕೊಲೆ ಕೇಸ್‌: 13 ಆರೋಪಿಗಳ ಬಂಧನ,ಹಿಂದೂಪರ ಸಂಘಟನೆ ಮುಖಂಡ ಭರತ್ ಕುಮ್ಡೇಲು ವಿರುದ್ಧವೂ ಪ್ರಕರಣ ದಾಖಲು

ನ್ಯೂಸ್ ನಾಟೌಟ್ :ಬಂಟ್ವಾಳದ ಅಬ್ದುಲ್ ರಹಿಮಾನ್ (Abdul Rahiman) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟಿತ ಅಪರಾಧ ತಡೆ ಕಾಯ್ದೆಯಡಿ (KCOCA Act) 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ದೀಪಕ್, ಚಿಂತನ್, ಪ್ರಥ್ವಿರಾಜ್ ಜೋಗಿ, ಸುಮಿತ್ ಬಿ.ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ, ಪ್ರದೀಪ ಶಾಹಿತ್ @ ಸಾಹಿತ್, ಸಚಿನ್ @ ಸಚ್ಚು ರೊಟ್ಟಿಗುಡ್ಡೆ, ರಂಜಿತ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಅರೋಪಿಗಳನ್ನು ಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹಿಂದೂಪರ ಸಂಘಟನೆ ಮುಖಂಡ ಭರತ್ ಕುಮ್ಡೇಲು ವಿರುದ್ಧವೂ ಪ್ರಕರಣ ದಾಖಲಾಗಿದೆ. ಬಂಧನ ಭೀತಿ ಹಿನ್ನೆಲೆ ಭರತ್‌ ತಲೆಮರೆಸಿಕೊಂಡಿದ್ದಾರೆ.

ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು, ಕಾನೂನುಬಾಹಿರ ಚಟುವಟಿಕೆ, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ ಎಂದು‌ ಆರೋಪಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles