ನ್ಯೂಸ್ ನಾಟೌಟ್ :ಬಹುಭಾಷಾ ನಟಿ ರಶ್ಮಿಕಾ ಮಂದಣ್ಣರ ಡೀಪ್ ಫೇಕ್ ವಿಡಿಯೋ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.ಈ ಬಗ್ಗೆ ಕೇಂದ್ರದಿಂದಲೂ ಎಚ್ಚರಿಕೆಯನ್ನು ಸೂಚಿಸಲಾಗಿತ್ತು. ಇದೀಗ ಅದರ ಬೆನ್ನಲ್ಲೇ ಅವರದ್ದೇ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್ ಆಗುತ್ತಿದೆ. ಅ.23ರಂದೇ ವಿಡಿಯೋ ಪೋಸ್ಟ್ ಮಾಡಲಾಗಿದೆ.ಮತ್ತೆ ಈ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಝರಾ ಪಟೇಲ್ ಎಂಬಾಕೆಯ ಒರಿಜಿನಲ್ ವಿಡಿಯೋಗೆ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ ರಶ್ಮಿಕಾ ಮುಖವನ್ನು ಎಡಿಟ್ ಮಾಡಿ ಹರಿಬಿಟ್ಟಿದ್ದರು.ಇದು ಎಲ್ಲಡೆ ವೈರಲ್ ಆಗಿ, ಸಾಕಷ್ಟು ಚರ್ಚೆಯಾಗುತ್ತಿದ್ದು, ರಶ್ಮಿಕಾ ಗಮನಕ್ಕೂ ಬಂದಿದ್ದು, ಆತಂಕ ವ್ಯಕ್ತಪಡಿಸಿದ್ದಾರೆ. ಇದೊಂದು ಆಘಾತಕಾರಿ ಬೆಳವಣಿಗೆಯಾಗಿದ್ದು, ಅನೇಕ ಗಣ್ಯ ವ್ಯಕ್ತಿಗಳು ಇದನ್ನು ಖಂಡಿಸಿದ್ದಾರೆ. ಇದು ಕೇಂದ್ರ ಸರ್ಕಾರದ ಗಮನಕ್ಕೂ ಬಂದಿದ್ದು, ಸಾಮಾಜಿಕ ಜಾಲತಾಣ ಬಳಸುವವರಿಗೆ ಕೆಲವೊಂದು ಕಾನೂನು ನಿಯಮಗಳ ಎಚ್ಚರಿಕೆಯನ್ನು ನೀಡಿದೆ.ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಕನ್ನಡಿ ಮುಂದೆ ನಿಂತು ತನ್ನನ್ನು ನೋಡುತ್ತಿರುವ ಯುವತಿಯ ಮುಖಕ್ಕೆ ಡೀಪ್ ಫೇಕ್ ಟೆಕ್ನಾಲಜಿ ಮೂಲಕ ರಶ್ಮಿಕಾ ಮುಖವನ್ನು ಎಡಿಟ್ ಮಾಡಲಾಗಿದೆ. ಕ್ರಶ್ ಮಿಕಾ ಹೆಸರಿನ ಇನ್ಸ್ಟಾಗ್ರಾಂ ಖಾತೆಯಲ್ಲಿ ಅ.23ರಂದು ವಿಡಿಯೋ ಪೋಸ್ಟ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
https://www.instagram.com/p/CyvFfuDy8-E/?utm_source=ig_embed&utm_campaign=embed_video_watch_again
https://www.instagram.com/p/CyvFfuDy8-E/?utm_source=ig_embed&utm_campaign=embed_video_watch_again