ನ್ಯೂಸ್ ನಾಟೌಟ್: ‘ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಎಫ್ಐಆರ್ ದಾಖಲಿಸಿದ್ದು , ಜನಾಂಗ ನಿಂದನೆಯ ಕಾರಣ ಪ್ರಕರಣ ಇಂದು(ನ.೧೪) ರಂದು ದಾಖಲಾಗಿದೆ. ತನಿಷಾ ಬಿಗ್ ಬಾಸ್ ಮನೆಯಲ್ಲಿ ಅವಹೇಳನಕಾರಿ ಪದವನ್ನು ಬಳಕೆ ಮಾಡಿದ್ದರು. ಹೀಗಾಗಿ ಎಸ್ ಸಿ, ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲು ಮಾಡಲಾಗಿದೆ.
ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವವರು ದೂರು ನೀಡಿದ್ದಾರೆ.
ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಲಾಗಿದೆ. ಇದರಿಂದ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾಗಿ ಆರೋಪಿಸಲಾಗಿದೆ. ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಲಾಗಿದೆ.
ಒಮ್ಮೆ ಪ್ರತಾಪ್ ಅವರಿಗೆ ತನಿಷಾ ಮಾತಿನ ಮಧ್ಯೆ ವಡ್ಡನ ತರ ಆಡಬೇಡ ಎಂದು ಹೇಳಿದ್ದಾರೆ. ಇದು ಕೆಲವರಿಗೆ ಬೇಸರ ತಂದಿದೆ ಎನ್ನಲಾಗಿದೆ.
ತನಿಷಾ ಡ್ರೋಣ್ ಪ್ರತಾಪ್ ಜೊತೆ ಮಾತನಾಡುವಾಗ ಬೋವಿ ಜನಾಂಗದ ಬಗ್ಗೆ ಅವಮಾನಕರ ಪದ ಬಳಸಿದ್ದಾರೆ ಅಂತ ದೂರಿನಲ್ಲಿ ಆರೋಪಿಸಲಾಗಿದೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವರು ದೂರು ನೀಡಿದ್ದಾರೆ ಎಂದು ವರದಿ ತಿಳಿಸಿದೆ.