ನ್ಯೂಸ್ ನಾಟೌಟ್ : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕುಡಚಿಯ ಸಂಬಂಧಿಕರ ಮನೆಯಲ್ಲಿ ಪ್ರವೀಣ್ ಅರುಣ್ ಚೌಗಲೆ ತಲೆಮರೆಸಿಕೊಂಡಿದ್ದ.ಘಟನೆ ನಡೆದ ಮರುದಿನ ಆತನ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಆತನ ಮೊಬೈಲ್ ಸ್ವಿಚ್ ಆನ್ ಆದಂತೆ ಎಚ್ಚೆತ್ತುಕೊಂಡ ಪೊಲೀಸರು ಕೂಡಲೇ ಬಂಧಿಸಿದ್ದಾರೆ.
ಇದೀಗ ಆರೋಪಿ ಪ್ರವೀಣ್ ಅರುಣ್ ಚೌಗಲೆ ಹಿನ್ನಲೆ ಏನು? ಆತ ಎಲ್ಲಿಯವನು ಎನ್ನುವ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.ಈತನ ಬಗ್ಗೆ ಇಂಚಿಂಚು ಮಾಹಿತಿ ಹೊರಬರುತ್ತಿದ್ದು,ಈತ ಮೊದಲಿಗೆ ಪೂನಾದ (ಪುಣೆ) ಪೊಲೀಸ್ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಮೂರು ತಿಂಗಳ ನಂತರ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ೧೦ ವರ್ಷದಿಂದ ಈತ ಕ್ಯಾಬಿನ್ ಕ್ರ್ಯೂ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಚೌಗಲೆ ಮೂರು ತಿಂಗಳು ಪೊಲೀಸ್ ಇಲಾಖೆಯಲ್ಲಿದ್ದು, ಮೂರೇ ತಿಂಗಳಲ್ಲೇ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದನು. ಬಳಿಕ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದನು ಎಂದು ತಿಳಿದು ಬಂದಿದೆ.