ನ್ಯೂಸ್ ನಾಟೌಟ್ : ಹೆರಿಗೆ ವೇಳೆಯಲ್ಲಿ ಮಗುವೊಂದು ದಾರುಣವಾಗಿ ಮೃತಪಟ್ಟಿದ್ದು,ಕುಂದಾಪುರ ಸರಕಾರಿ ಆಸ್ಪತ್ರೆ ಮುಂದೆ ಊರವರು ಅಹೋ ರಾತ್ರಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ರು.
ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ,ಜ್ಯೋತಿ ಎಂಬವರ ಮಗು ಸಾವನ್ನಪ್ಪಿದೆ.ನವೆಂಬರ್ 17 ರಂದು ಹೆರಿಗೆ ನೋವಿನ ಹಿನ್ನಲೆ ಕುಂದಾಪುರ ತಾಲೂಕು ಸರಕಾರಿ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದರು.ಈ ವೇಳೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.ಇದು ವೈದ್ಯರ ನಿರ್ಲಕ್ಷ್ಯದಿಂದಾದ ಸಾವು ಎಂದು ಆಕ್ರೋಶಗೊಂಡ ಊರವರು ಪ್ರತಿಭಟನೆ ನಡೆಸಿದ್ದಾರೆ.ಈ ಬಗ್ಗೆ ಒತ್ತಾಯಿಸಿದ ಗ್ರಾಮಸ್ಥರು ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಬೇಕು ಮತ್ತು ಡಿಸಿ,ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಬರಲು ಆಗ್ರಹ ಮಾಡಿದರು.
ಮಗುವಿನ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ಉಡಾಫೆ ಹಾಗೂ ಹೆರಿಗೆ ಸಂದರ್ಭ ರಕ್ತಸ್ರಾವವಿದೆ ಈ ಬಗ್ಗೆ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಆರೋಪವಿದ್ದು,ಎಂಟೂವರೆ ತಿಂಗಳಿನಿಂದ ಸ್ಕ್ಯಾನಿಂಗ್ ಮಾಡಲು ಒಪ್ಪದ ಡಾಕ್ಟರ್ ವಿರುದ್ಧ ಮನೆಯವರು ಆಕ್ರೋಶ ಹೊರ ಹಾಕಿದರು.ಕುಟುಂಬಸ್ಥರು ಇಡೀ ರಾತ್ರಿ ಕುಂದಾಪುರ ಸರಕಾರಿ ಆಸ್ಪತ್ರೆ ಮುಂದೆ ಕುಳಿತು ಪ್ರತಿಭಟನೆ ಮಾಡಿದರು.ಸ್ಥಳಕ್ಕೆ ಬಂದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಂದ ಕುಟುಂಬಕ್ಕೆ ಸಾಂತ್ವಾನ ಹೇಳಿದರು.ಸ್ಥಳಕ್ಕೆ ಡಿಎಚ್ ಓ, ವೈದ್ಯಾಧಿಕಾರಿ ರಾಬರ್ಟ್ ರೆಬೆಲ್ಲೋ ಆಗಮಿಸಿದ್ದು, ಅವರಿಂದ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಲಾಯಿತು.