ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಮಡಪ್ಪಾಡಿ ಸರಕಾರಿ ಉನ್ನತೀಕರಿಸಿದ ಹಿ.ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ಮಾಡಿಕೊಡುವ ಶಿಬಿರ ನ.26ರಂದು ನಡೆಯಲಿದೆ.
ಶಿಬಿರದಲ್ಲಿ ಎಲ್ಲಾ ರೀತಿಯ ಕಾಯಿಲೆಗಳಿಗೆ ತಜ್ಞ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು. ಜತೆಗೆ ಆರೋಗ್ಯ ಇಲಾಖೆಯಿಂದ ರಕ್ತ ವರ್ಗೀಕರಣ ಗುಂಪು ಕಾರ್ಡ್ ಹಾಗೂ ಆಯುಷ್ಮಾನ್ ಕರ್ನಾಟಕ ಉಚಿತ ನೋಂದಣಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ಲದೇ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ಮಾಡಿಕೊಡಲಾಗುವುದು.
ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ), ಕೆ.ವಿ.ಜಿ. ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಟತ್ರೆ, ಕೆ.ವಿ.ಜಿ. ದಂತ ಮಹಾ ವಿದ್ಯಾಲಯ ಮತ್ತು ಆಸ್ಟತ್ರೆ, ಕೆ.ವಿ.ಜಿ. ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಟತ್ರೆ ಹಾಗೂ ಮಡಪ್ಪಾಡಿ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿದೆ ಶಿಬಿರ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ‘ರಿ’ ಸುಳ್ಯ ಇದರ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಉದ್ಘಾಟಿಸಲಿದ್ದಾರೆ. ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾ ಜಯರಾಮ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ. ಜಯರಾಮ, ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಪೂರ್ವಾಧ್ಯಕ್ಷ ನಿತ್ಯಾನಂದ ಮುಂಡೋಡಿ ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಚಿನ್ ಬಳ್ಳಡ್ಕ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರಿಗೆ ಸನ್ಮಾನ ನಡೆಯಲಿದೆ. ಕಾರ್ಯಕ್ರಮಕ್ಕೆ ಯುವಕ ಮಂಡಲ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ, ಶ್ರೀರಾಮ ಭಜನಾ ಮಂಡಳಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ, ಗ್ರಾಮ ಪಂಚಾಯತ್ ಮಡಪ್ಪಾಡಿ, ಲಯನ್ಸ್ ಕ್ಲಬ್ ಗುತ್ತಿಗಾರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಡಪ್ಪಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಪ್ಪಾಡಿ ಉಪಕೇಂದ್ರ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘ ಸ.ಉ.ಹಿ.ಪ್ರಾ. ಶಾಲೆ ಮಡಪ್ಪಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಂಜೀವಿನಿ ಒಕ್ಕೂಟ, ಕ್ಷೇತ್ರ ಒಡಿಯೂರು ಸಂಘ, ಲಕ್ಷ್ಮೀ ಯುವತಿ ಮಂಡಲ ಬಲ್ಕಜೆ ಸಹಕಾರ ನೀಡಲಿದ್ದಾರೆ. ಶಿಬಿರದ ಪ್ರಯೋಜನವನ್ನು ಮಡಪ್ಪಾಡಿ ಆಸುಪಾಸಿನ ನಾಗರಿಕರು ಪಡೆದುಕೊಳ್ಳುವಂತೆ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.